ತುಮಕೂರು:ಕೊರೊನಾ ಸೋಂಕು ಇರುವ ಬೇರೆ ಜಿಲ್ಲೆಯಿಂದ ಜಿಲ್ಲೆಯ ಹಳ್ಳಿಗಳಿಗೆ ಜನರು ಹೆಚ್ಚಾಗಿ ಬರುತ್ತಿದ್ದಾರೆ. ಅಂತಹವರ ಮೇಲೆ ಜಿಲ್ಲಾಡಳಿತ ವಿಲೇಜ್ ಟಾಸ್ಕ್ ಫೋರ್ಸ್ ಮೂಲಕ ಹದ್ದಿನ ಕಣ್ಣು ಇರಿಸಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದರು.
ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬರುವ ವ್ಯಕ್ತಿಗಳ ಬಗ್ಗೆ ನಿತ್ಯ ಮಾಹಿತಿ ಪಡೆಯಲಾಗುತ್ತಿದೆ. ಅಲ್ಲದೆ ಅಂತಹ ವ್ಯಕ್ತಿಗಳ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತಿದೆ. ನಾಳೆಯಿಂದ ಜಿಲ್ಲಾದ್ಯಂತ ಇನ್ನಷ್ಟು ಕಟ್ಟೆಚ್ಚರ ವಹಿಸಲಾಗುವುದು. ಲಾಕ್ಡೌನ್ ಬಗ್ಗೆ ಜನರು ಇನ್ನಷ್ಟು ಗಂಭೀರವಾಗಿ ತೆಗೆದುಕೊಳ್ಳಬೇಕು. ಉಲ್ಲಂಘನೆ ಆಗದಂತೆ ನಾಲ್ಕು ಮೊಬೈಲ್ ಸ್ಕ್ವಾಡ್ಗಳನ್ನು ರಚಿಸಲಾಗಿದೆ ಎಂದಿದ್ದಾರೆ.