ತುಮಕೂರು: ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ನಿಯಂತ್ರಣಕ್ಕೆ ಕೈಂಗೊಂಡಿರುವ ಸಿದ್ಧತೆಗಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ , ಇನ್ನು ಯಾವುದೇ ರೀತಿಯ ಸಮಸ್ಯೆ ಇಲ್ಲ. ತುಮಕೂರಿನ ಜಿಲ್ಲಾಸ್ಪತ್ರೆಯನ್ನು ಕೊವಿಡ್ 19 ಆಸ್ಪತ್ರೆಯಾಗಿ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಸಿದ್ಧತೆ ಪರಿಶೀಲಿಸಿದ ಡಿಸಿ - tumakuru news
ಸೋಮವಾರ ಪಾವಗಡಕ್ಕೆ ಭೇಟಿ ನೀಡಿ ಸರ್ಕಾರಿ ಆಸ್ಪತ್ರೆ ಪರಿಶೀಲಿಸಿ ಮಾತನಾಡಿದ ಅವರು, 400 ಬೆಡ್ಡಿನ ಜಿಲ್ಲಾಸ್ಪತ್ರೆಯ ಬಳಕೆ ಹಾಗೂ ಖಾಸಗಿ ಆಸ್ಪತ್ರೆಯಾದ 1800 ಹಾಸಿಗೆಯುಳ್ಳ ಶ್ರೀದೇವಿ ಆಸ್ಪತ್ರೆಯನ್ನು ಬಳಕೆ ಮಾಡಿಕೊಳ್ಳುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು.

ಪಾವಗಡ ತಾಲೂಕಿನಲ್ಲಿ ರೈತರು ಬೆಳೆದಿರುವ ತರಕಾರಿ, ಕಲ್ಲಂಗಡಿ, ಕರಬೂಜ, ಪರಂಗಿಯನ್ನು ಹಾಪ್ ಕಾಮ್ಸ್ ನಿಂದ ಖರೀದಿ ಮಾಡಲು ತಿಳಿಸಲಾಗಿದ್ದು, ಎಲ್ಲ ರೈತರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
Last Updated : Apr 7, 2020, 2:50 PM IST