ಕರ್ನಾಟಕ

karnataka

ETV Bharat / state

ವೈದ್ಯರ ಸಲಹಾ ಚೀಟಿಯಿಲ್ಲದೆ ಔಷಧ ಮಾರಾಟ ಮಾಡಿದ್ರೆ ಪರವಾನಗಿ ರದ್ದು: ಜಿಲ್ಲಾಧಿಕಾರಿ ಎಚ್ಚರಿಕೆ - District Collector Rakesh Kumar

ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು ವೈದ್ಯರ ಸಲಹಾ ಚೀಟಿ ಇಲ್ಲದೆ ಜ್ವರ, ಶೀತ, ಕೆಮ್ಮು ಅಥವಾ ಇತರ ಆರೋಗ್ಯ ಸಮಸ್ಯೆಗಳಿಗೆ ಔಷಧಿ ಮಾರುತ್ತಿರುವುದು ಕಂಡುಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

Tumkur District Collector Rakesh Kumar meeting with medical traders
ವೈದ್ಯರ ಚೀಟಿ ಇಲ್ಲದೆ ಔಷಧಿ ಮಾರದಿರುವಂತೆ ಜಿಲ್ಲಾಧಿಕಾರಿ ಎಚ್ಚರಿಕೆ

By

Published : May 17, 2020, 8:23 PM IST

ತುಮಕೂರು: ವೈದ್ಯರ ಸಲಹಾ ಚೀಟಿಯಿಲ್ಲದೆ ಜ್ವರ, ಶೀತ, ಕೆಮ್ಮು ಹಾಗೂ ಐಎಲ್​ಐಗೆ ಸಂಬಂಧಪಟ್ಟಂತಹ ಯಾವುದೇ ಔಷಧಗಳನ್ನು ಮಾರಾಟ ಮಾಡಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಔಷಧ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ವೈದ್ಯರ ಚೀಟಿ ಇಲ್ಲದೆ ಔಷಧ ಮಾರದಿರುವಂತೆ ಜಿಲ್ಲಾಧಿಕಾರಿ ಎಚ್ಚರಿಕೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಜಿಲ್ಲಾ ಔಷಧ ವ್ಯಾಪಾರಸ್ಥರ ಸಭೆ ನಡೆಸಿ ಮಾತನಾಡಿದ ಅವರು, ಮೆಡಿಕಲ್ ಸ್ಟೋರ್​ಗಳಲ್ಲಿ ಔಷಧ ಕೊಳ್ಳಲು ಬರುವ ರೋಗಿ ಮತ್ತು ಅವರನ್ನು ತಪಾಸಣೆ ಮಾಡಿರುವ ವೈದ್ಯರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆಯಬೇಕು. ಅಲ್ಲದೆ ಈ ಮಾಹಿತಿಯನ್ನು ಸರ್ಕಾರ ನೀಡಿರುವ ವೆಬ್​ಸೈಟ್​ನಲ್ಲಿ ನಮೂದಿಸಬೇಕೆಂದು ಸೂಚಿಸಿದರು.

ಒಂದು ವೇಳೆ ವೈದ್ಯರ ಸಲಹಾ ಚೀಟಿಯಿಲ್ಲದೆ ಔಷಧಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದರೆ ಅಂತವರ ವಿರುದ್ಧ ಎಪಿಡೆಮಿಕ್​ ಆ್ಯಕ್ಟ್​ ಅಡಿಯಲ್ಲಿ ಸೂಕ್ತ ಕ್ರಮ ಜರುಗಿಸಿ ಪರವಾನಗಿಗಳನ್ನ ರದ್ದು ಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details