93 ಕೊರೊನಾ ಶಂಕಿತರ ಪರೀಕ್ಷಾ ವರದಿ ನಿರೀಕ್ಷೆಯಲ್ಲಿ ತುಮಕೂರು ಜಿಲ್ಲಾಡಳಿತ - ಲೆಟೆಸ್ಟ್ ಕೊರೊನಾ ನ್ಯೂಸ್
ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ, ಈವರೆಗೆ 332 ಶಂಕಿತರ ರಕ್ತ ಮತ್ತು ಗಂಟಲು ದ್ರವದ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಅದರಲ್ಲಿ 233 ವರದಿಗಳು ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

93 ಕೊರೊನಾ ಶಂಕಿತರ ಪರೀಕ್ಷಾ ವರದಿ ನಿರೀಕ್ಷೆಯಲ್ಲಿ ತುಮಕೂರು ಜಿಲ್ಲಾಡಳಿತ
ತುಮಕೂರು: ಕೋವಿಡ್-19 ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 93 ಮಂದಿಯ ರಕ್ತ ಮತ್ತು ಗಂಟಲು ದ್ರವದ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ. ಇಂದು 9 ಮಂದಿಯನ್ನು ಆಸ್ಪತ್ರೆಯಲ್ಲಿ ಐಸೋಲೇಷನ್ ನಲ್ಲಿ ಇಡಲಾಗಿದ್ದು ಪ್ರತ್ಯೇಕಗೊಳಿಸಿದವರ ಸಂಖ್ಯೆ 188ಕ್ಕೆ ಏರಿಕೆಯಾಗಿದೆ. ಈವರೆಗೆ 332 ಶಂಕಿತರ ರಕ್ತ ಮತ್ತು ಗಂಟಲು ದ್ರವದ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 233 ವರದಿಗಳು ನೆಗೆಟಿವ್ ಬಂದಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಇದುವರೆಗೆ 480 ಮಂದಿಯ ಮೇಲೆ ನಿಗಾ ವಹಿಸಲಾಗಿದೆ. 78 ಮಂದಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ. 292 ಮಂದಿಯು 28 ದಿನಗಳ ಹೋಂ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಇದುವರೆಗೆ ಇಬ್ಬರು ವ್ಯಕ್ತಿಗಳಲ್ಲಿ ಪಾಸಿಟಿವ್ ಬಂದಿತ್ತು. ಅದರಲ್ಲಿ ಸಿರಾ ಪಟ್ಟಣದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದಿದ್ದಾರೆ.