ಕರ್ನಾಟಕ

karnataka

ETV Bharat / state

ಕೊರೊನಾ ಆತಂಕ : 231 ಮಂದಿಯ ವರದಿ ನಿರೀಕ್ಷೆಯಲ್ಲಿ ತುಮಕೂರು ಜಿಲ್ಲೆ - ತುಮಕೂರು ಕೊರೊನಾ ವರದಿ

ತುಮಕೂರಿನ 231 ಮಂದಿಯ ತಪಾಸಣೆ ವರದಿ ನಿರೀಕ್ಷಿಸಲಾಗುತ್ತಿದೆ ಎಂದು ಆರೋಗ್ಯಾಧಿಕಾರಿ ಡಾ.ಚಂದ್ರಿಕಾ ತಿಳಿಸಿದ್ದಾರೆ.

231 ಮಂದಿಯ ವರದಿ ನಿರೀಕ್ಷೆಯಲ್ಲಿ ತುಮಕೂರು ಜಿಲ್ಲೆ…
231 ಮಂದಿಯ ವರದಿ ನಿರೀಕ್ಷೆಯಲ್ಲಿ ತುಮಕೂರು ಜಿಲ್ಲೆ…

By

Published : Apr 22, 2020, 11:16 PM IST

ತುಮಕೂರು: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 231 ಮಂದಿಯ ತಪಾಸಣೆಯ ವರದಿ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ ತಿಳಿಸಿದ್ದಾರೆ.

ಜಿಲ್ಲೆಗೆ ಇದುವರೆಗೆ ಬಂದಿರುವ 480 ಮಂದಿಯ ಮೇಲೆ ತೀವ್ರ ನಿಗಾವಹಿಸಲಾಗಿದೆ. ಈ ಪೈಕಿ ಯಾರೂ ಹೋಂ ಕ್ವಾರಂಟೈನ್​ನಲ್ಲಿ ಇಲ್ಲ. ಒಟ್ಟು 381 ಮಂದಿಯನ್ನು ಐಸೋಲೆಷನ್​ನಲ್ಲಿ ಇಡಲಾಗಿದ್ದು, 370 ಜನರ 28 ದಿನಗಳ ಹೋಂ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ ಎಂದರು.

ವರದಿ

ಈ ವರೆಗೂ 1,002 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 764 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿವೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ ಎಂದು ಹೇಳಿದರು.

ABOUT THE AUTHOR

...view details