ತುಮಕೂರು:ಸೆಪ್ಟೆಂಬರ್ 2ರಂದು ವಿಶ್ವ ತೆಂಗು ದಿನವಾಗಿ ಆಚರಿಸಲ್ಪಡಲಾಗುತ್ತಿದೆ. ಕಲ್ಪತರು ನಾಡು ತುಮಕೂರು ಜಿಲ್ಲೆಯು ರಾಜ್ಯದಲ್ಲಿಯೇ ಅತಿ ಹೆಚ್ಚು ತೆಂಗು ಬೆಳೆಯುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದಲ್ಲಿಯೇ ಕರ್ನಾಟಕ ಹೆಚ್ಚು ತೆಂಗು ಬೆಳೆಯುವ ಪ್ರದೇಶಗಳ ಸಾಲಿನಲ್ಲಿ 2ನೇ ಸ್ಥಾನದಲ್ಲಿದೆ. ನಂತರ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಅತಿ ಹೆಚ್ಚು ತೆಂಗು ಬೆಳೆಯುವ ಜಿಲ್ಲೆ ಎಂದು ಗುರುತಿಸಲ್ಪಟ್ಟಿದೆ.
ಗುಬ್ಬಿ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಿಪಟೂರು ತಾಲೂಕಿನಲ್ಲಿ ಅತಿ ಹೆಚ್ಚು ತೆಂಗು ಬೆಳೆಯಲಾಗುತ್ತದೆ. ಅದರಲ್ಲೂ ತಿಪಟೂರು ಟಾಲ್ ಎಂಬ ತೆಂಗು ತಳಿ ಸಾಕಷ್ಟು ಹೆಸರುವಾಸಿಯಾಗಿದ್ದು, ಭಾರೀ ಬೇಡಿಕೆ ಇದೆ. ಜಿಲ್ಲೆಯಲ್ಲಿ ತೆಂಗು ಸಾಂಪ್ರದಾಯಿಕ ಬೆಳೆಯಾಗಿದೆ. ಈ ವರ್ಷ ಅತಿ ಹೆಚ್ಚು ತೆಂಗು ಬೆಳೆ ವಿಸ್ತರಣೆಯಾಗಿರೋದು ಕೂಡ ಇಲ್ಲಿ ಗಮನಾರ್ಹ ಅಂಶವಾಗಿದೆ.