ಕರ್ನಾಟಕ

karnataka

ETV Bharat / state

ತುಮಕೂರು: ಕೌಟುಂಬಿಕ ಕಲಹ.. ಮಚ್ಚಿನಿಂದ ಕೊಚ್ಚಿ ಪತ್ನಿಯ ಕೊಂದ ಪತಿ - murder of a wife by her husband at tumkur

ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಸಿ ಎಸ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

murder of a wife by her husband at tumkur
ತುಮಕೂರು

By

Published : Jan 30, 2022, 6:06 PM IST

ತುಮಕೂರು:ಕೌಟುಂಬಿಕ ಕಲಹ ಹಿನ್ನೆಲೆ ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಮಂಚಿಹಳ್ಳಿಯಲ್ಲಿ ನಡೆದಿದೆ. 35 ವರ್ಷ ವಯಸ್ಸಿನ ವಸಂತಮ್ಮ ಕೊಲೆಯಾದ ಗೃಹಿಣಿ ಎಂದು ತಿಳಿದುಬಂದಿದೆ.

ಪತಿಯಿಂದಲೇ ಪತ್ನಿಯ ಹತ್ಯೆ

ಭಾನುವಾರ ಬೆಳಗ್ಗೆ ಸುಮಾರು 10 ಗಂಟೆಗೆ ಗಂಡ ಈಶ್ವರಯ್ಯ ಮತ್ತು ವಸಂತಮ್ಮ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಈ ನಡುವೆ ಸಿಟ್ಟಿಗೆದ್ದ ಈಶ್ವರಯ್ಯ ಮನೆಯಲ್ಲಿದ್ದ ಮಚ್ಚಿನಿಂದ ವಸಂತಮ್ಮರನ್ನು ಕೊಚ್ಚಿಹಾಕಿದ್ದಾನೆ.

ಇದನ್ನೂ ಓದಿ:ಬೆಂಗಳೂರಲ್ಲಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಚಾಲಕ: ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ

ಮಚ್ಚಿನೇಟಿನಿಂದ ಸ್ಥಳದಲ್ಲೇ ಕುಸಿದು ಬಿದ್ದ ವಸಂತಮ್ಮ ಅವರು ತೀವ್ರ ರಕ್ತ ಸ್ರಾವದಿಂದ ಮೃತಪಟ್ಟಿದ್ದಾರೆ. ತಕ್ಷಣ ಪತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸಿ ಎಸ್ ಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿ ಎಸ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details