ಕರ್ನಾಟಕ

karnataka

ETV Bharat / state

ಬೀದಿಬದಿ ಮಾರಾಟಗಾರರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ - Foot Path Traders protest news

ಫುಟ್‌ಪಾತ್ ವ್ಯಾಪಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತುಮಕೂರು ಜಿಲ್ಲಾ ಫುಟ್‌ಪಾತ್ ವ್ಯಾಪಾರಿಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು..

Protest
Protest

By

Published : Jul 29, 2020, 4:57 PM IST

ತುಮಕೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೀದಿಬದಿ ಮಾರಾಟಗಾರರ ಮೇಲೆ ದೌರ್ಜನ್ಯ ಎಸಗಿದವರು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಡಾ. ಕೆ ರಾಕೇಶ್‌ಕುಮಾರ್ ಅವರಿಗೆ ತುಮಕೂರು ಜಿಲ್ಲಾ ಫುಟ್‌ಪಾತ್ ವ್ಯಾಪಾರಿಗಳ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ವೇಳೆ ರಾಜ್ಯದ ಯಾವುದೇ ನಗರ ಅಥವಾ ಪಟ್ಟಣಗಳಲ್ಲಿ ಬೀದಿಬದಿ ಮಾರಾಟಗಾರರ ಸ್ಥಳಾಂತರ, ಪುನರ್ವಸತಿ ಮತ್ತಿತರೆ ಪ್ರಶ್ನೆಗಳು ಎದುರಾದಲ್ಲಿ ಕಾನೂನು ಬದ್ಧವಾಗಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು. ಪೊಲೀಸರು ಏಕಾಏಕಿ ದಾಳಿ ಮಾಡಬಾರದು ಎಂದು‌ ಆಗ್ರಹಿಸಿದರು.

ಕೊರೊನಾ ಹಿನ್ನೆಲೆ ಈಗಾಗಲೇ ಸಂಕಷ್ಟದಲ್ಲಿರುವ ಬೀದಿಬದಿ ಮಾರಾಟಗಾರರಿಗೆ ರಾಜ್ಯ ಸರ್ಕಾರ ನೆರವು ನೀಡಬೇಕು, ಅವರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಿ ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ನೀಡುವ ಜೊತೆಗೆ ಅವರ ಕುಟುಂಬದವರ ಆರೋಗ್ಯರಕ್ಷಣೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧಾಪ್ಯದಲ್ಲಿ ಪಿಂಚಣಿ ನೀಡುವಂತಹ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಬೇಕು. ಜೊತೆಗೆ ಗುರುತಿನ ಚೀಟಿ ನೀಡುವುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

For All Latest Updates

ABOUT THE AUTHOR

...view details