ತುಮಕೂರು:ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕನ ಮೇಲೆ ಮಾಜಿ ಶಾಸಕರೊಬ್ಬರ ಬೆಂಬಲಿಗ ಕಾಂತರಾಜು ಹಲ್ಲೆ ನಡೆಸಿದ್ದಾರೆ ಎಂದು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಂತರಾಜು ಅವರು ಮಾಜಿ ಶಾಸಕ ಸುರೇಶ್ ಗೌಡ ಬೆಂಬಲಿಗ ಎನ್ನಲಾಗಿದ್ದು, ತಮ್ಮದೇ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ವಿನಯ್ ಅದ್ವೈತ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಸಿಕ ಕಾರ್ಯಕಾರಣಿ ಸಭೆ ನಡೆಯುತ್ತಿದ್ದ ವೇಳೆ ಜಿಲ್ಲಾ ಘಟಕ ಅಧ್ಯಕ್ಷ ಲಕ್ಷ್ಮೀಶ ಮುಂದೆಯೇ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ.
ಇತ್ತಿಚೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ತೆಗೆದಿದ್ದ ಸುರೇಶ್ ಗೌಡರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರಲಿಲ್ಲ ಎಂಬ ಕಾರಣಕ್ಕೆ ಗಲಾಟೆ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಮುಂದುವರಿದ ಹಿಜಾಬ್ ವಿವಾದ: ಕುಂದಾಪುರದಲ್ಲಿ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು
ಕೆಲ ದಿನಗಳ ಹಿಂದೆ ತುಮಕೂರು ಗ್ರಾಮಾಂತರ ಮಾಜಿ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ