ಕರ್ನಾಟಕ

karnataka

ETV Bharat / state

ನಮ್ಮ ಸೇವೆಯನ್ನು ಕಾಯಂಗೊಳಿಸಿ: ಅತಿಥಿ ಉಪನ್ಯಾಸಕರಿಂದ ಸರ್ಕಾರಕ್ಕೆ ಮನವಿ

ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಕಾಯಂಗೊಳಿಸಬೇಕು. ಇಲ್ಲವಾದರೆ ಜನವರಿ ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗುವುದೆಂದು ತುಮಕೂರು ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸ ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ತಿಳಿಸಿದರು.

ಅತಿಥಿ ಉಪನ್ಯಾಸಕರಿಂದ ಸರ್ಕಾರಕ್ಕೆ ಮನವಿ

By

Published : Nov 5, 2019, 10:23 PM IST

ತುಮಕೂರು:ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಕಾಯಂಗೊಳಿಸಬೇಕು. ಇಲ್ಲವಾದರೆ ಜನವರಿಯಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗುವುದೆಂದು ತುಮಕೂರು ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸ ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ತಿಳಿಸಿದರು.

ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕನಿಷ್ಠ ಗೌರವಧನ ವೇತನ ಪಡೆದು ಕಾರ್ಯನಿರ್ವಹಿಸುತ್ತಾ ಬಂದಿದ್ದೇವೆ. ಸುದೀರ್ಘ ಕಾಲಗಳಿಂದ ನಮ್ಮ ಸೇವೆಯನ್ನು ಬಳಸಿಕೊಂಡು, ಈಗ ಸರ್ಕಾರ ಹೊಸ ನೇಮಕಾತಿಗಳನ್ನು ಮಾಡಿಕೊಳ್ಳಲು ಮುಂದಾಗಿದೆ. ಇದರಿಂದ 2,500 ಅತಿಥಿ ಉಪನ್ಯಾಸಕರು ಬೀದಿಪಾಲಾಗುತ್ತಾರೆ ಎಂದರು. ಆದ್ದರಿಂದ ಸೇವೆಯಲ್ಲಿರುವ 13,000 ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಿ ಕಾಯಂ ಮಾಡಬೇಕೆಂದು ಒತ್ತಾಯಿಸಿದರು.

ಕಳೆದ 19 ವರ್ಷಗಳಿಂದ ಸರ್ಕಾರಿ ಕಾಲೇಜಿನಲ್ಲಿ ಶಿಕ್ಷಕನಾಗಿ ಅತ್ಯಂತ ಕಡಿಮೆ ವೇತನಕ್ಕೆ ಕಾರ್ಯನಿರ್ವಹಿಸಿದ್ದೇನೆ. ರಾಜ್ಯ ಸರ್ಕಾರ ಅತಿಥಿ ಎಂಬ ತಾಂತ್ರಿಕ ಪದವನ್ನು ಬಳಸುವ ಮೂಲಕ ನಮ್ಮನ್ನು ಶೋಷಿಸುತ್ತಿದೆ ಎಂದರು. ಪ್ರತಿವರ್ಷವೂ ಸರ್ಕಾರ ಶಿಕ್ಷಕರನ್ನಾಗಿ ಆಯ್ಕೆ ಮಾಡಿಕೊಳ್ಳುತ್ತದೆ ನಂತರದಲ್ಲಿ ತೆಗೆದುಹಾಕುತ್ತದೆ. ಈ ರೀತಿ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿ ಪಾಲಾಗುತ್ತವೆ ಎಂದರು. ಹಾಗಾಗಿ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಿ ಖಾಯಂಗೊಳಿಸಬೇಕು. ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅತಿಥಿ ಉಪನ್ಯಾಸಕರಿಂದ ಸರ್ಕಾರಕ್ಕೆ ಮನವಿ

For All Latest Updates

TAGGED:

ABOUT THE AUTHOR

...view details