ಕರ್ನಾಟಕ

karnataka

ETV Bharat / state

ತುಮಕೂರು: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ 2019-20 ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ತಾಲೂಕು ಮಟ್ಟದ ಕ್ರೀಡಾಕೂಟ

By

Published : Aug 30, 2019, 6:31 PM IST

ತುಮಕೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ 2019-20 ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಈ ಕ್ರೀಡಾಕೂಟವು ಎರಡು ದಿನಗಳ ಕಾಲ ನಡೆಯಲಿದ್ದು, ವಾಲಿಬಾಲ್, ಕಬ್ಬಡ್ಡಿ, ಖೋ ಖೋ, ಅಥ್ಲೆಟಿಕ್ ಸ್ಪರ್ಧೆಗಳು ನಡೆದವು. ಸುಮಾರು 60ಕ್ಕೂ ಹೆಚ್ಚು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಲೂಕು ಮಟ್ಟದ ಕ್ರೀಡಾಕೂಟ

ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಸಂಚಾಲಕ ಟಿ.ಆರ್ ಬಸವರಾಜು ಮಾತನಾಡಿ, ಇಂದು ಅಥ್ಲೆಟಿಕ್ ಸ್ಪರ್ಧೆಗಳು ನಡೆಯುತ್ತಿದ್ದು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಸ್ಪರ್ಧಿಗಳನ್ನು ಜಿಲ್ಲಾಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದರು. ವಿಜೇತರಾದ ಸ್ಪರ್ಧಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ABOUT THE AUTHOR

...view details