ತುಮಕೂರು: ಚಳಿಗಾಲದ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿಯನ್ನು ಅನುಷ್ಠಾನಕ್ಕೆ ತರಲು ಸರ್ಕಾರಕ್ಕೆ ಒತ್ತಾಯ ಮಾಡಬೇಕೆಂದು ಮಾದಿಗ ದಂಡೋರ-ಎಂ.ಆರ್.ಹೆಚ್.ಎಸ್ ವತಿಯಿಂದ ಶಾಸಕ ಜ್ಯೋತಿಗಣೇಶ್ ಅವರಿಗೆ ಮನವಿಪತ್ರ ನೀಡಿ ಒತ್ತಾಯಿಸಲಾಯಿತು.
ತುಮಕೂರು: ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ - ದಂಡೋರ-ಎಂ.ಆರ್.ಹೆಚ್.ಎಸ್
ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ ಪಂಚ ನ್ಯಾಯಮೂರ್ತಿಗಳ ಪೀಠದ ತೀರ್ಪಿನಂತೆ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಮುಂದೆ ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯ ಮಾಡುವಂತೆ ಒತ್ತಾಯಿಸಿ, ಮಾದಿಗ ದಂಡೋರ ಸಮಿತಿಯ ಸದಸ್ಯರು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಜ್ಯೋತಿಗಣೇಶ್, ಸದಾಶಿವ ಆಯೋಗದ ವರದಿಯನ್ನು ಜಾರಿಗೆಗೊಳಿಸಬೇಕೆಂದು ಹಲವಾರು ವರ್ಷಗಳಿಂದಲೂ ಪ್ರತಿಭಟನೆಗಳು ನಡೆಯುತ್ತಲೇ ಇವೆ. ನಿಮ್ಮ ಹೋರಾಟಕ್ಕೆ ಹಿಂದಿನಿಂದಲೂ ನಮ್ಮ ಬೆಂಬಲವಿದೆ. ಜನಸಂಖ್ಯೆ ಹೆಚ್ಚಾದಂತೆ ಅಧಿಕಾರದಲ್ಲಿ ಅಸಮತೋಲನ ಹೆಚ್ಚಾಗುತ್ತಿದೆ. ನಿಮಗಿರುವ ಅಧಿಕಾರವನ್ನು ನಿಮ್ಮೊಳಗೆ ಇರುವವರೇ ಕೆಲವರು ಕಸಿದುಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅವುಗಳನ್ನು ಹೋಗಲಾಡಿಸಲು ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದರು.