ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಎಸ್ಪಿ ಕಚೇರಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.
ತುಮಕೂರು: ಸಿಬ್ಬಂದಿಗೆ ಸೋಂಕು, ಎಸ್ಪಿ ಕಚೇರಿ ಎರಡು ದಿನ ಸೀಲ್‌ಡೌನ್ - ಎಸ್ಪಿ ಕಚೇರಿ ಸಂಪೂರ್ಣ ಸೀಲ್ ಡೌನ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಎಸ್ಪಿ ಕಚೇರಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.
ತುಮಕೂರು
37 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ದೃಢವಾಗಿದೆ. ಜುಲೈ 1 ರಂದು ಇವರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಂದು ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಕುರಿತಂತೆ ಸ್ಪಷ್ಟನೆ ನೀಡಿರುವ ಜಿಲ್ಲಾ ಎಸ್ಪಿ ವಂಶಿಕೃಷ್ಣ, ಎರಡು ದಿನಗಳ ಕಾಲ ಕಚೇರಿಯಲ್ಲಿ ಯಾವುದೇ ಕೆಲಸಗಳು ನಡೆಯುವುದಿಲ್ಲ ಎಂದಿದ್ದಾರೆ.
ಇನ್ನೊಂದೆಡೆ, ಕಚೇರಿಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಮೂಲಗಳ ಪ್ರಕಾರ, ಎರಡು ದಿನಗಳ ಕಾಲ ಎಸ್ಪಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಕೆಲಸಕ್ಕೆ ಬಾರದಂತೆ ನಿರ್ದೇಶನ ನೀಡಲಾಗಿದೆ.