ಕರ್ನಾಟಕ

karnataka

ETV Bharat / state

ಶಾಸಕ ಗೌರಿಶಂಕರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಜಿಲ್ಲಾ ಪೊಲೀಸ್‌ ವರಿಷ್ಠ.. - ಶಾಸಕ ಗೌರಿಶಂಕರ್ ಪ್ರತಿಭಟನೆಗೆ ಅನುಮತಿ ನಿರಾಕರಣೆ

ಕೋವಿಡ್-19 ರೋಗದ ಹಿನ್ನೆಲೆಯಲ್ಲಿ ಹೆಚ್ಚಿನ ಜನ ಸೇರಿದಲ್ಲಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಮತ್ತು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಅನುಮತಿ ನಿರಾಕರಿಸಿರುವುದಾಗಿ ತಿಳಿಸಿದ್ದಾರೆ.

Police station
Police station

By

Published : Jun 16, 2020, 2:26 PM IST

ತುಮಕೂರು :ತುಮಕೂರು ಗ್ರಾಮಾಂತರ ಸರ್ಕಲ್ ಇನ್ಸ್​ಪೆಕ್ಟರ್​ ಮತ್ತು ಗ್ರಾಮಾಂತರ ಠಾಣೆಯ ಸಬ್ ಇನ್ಸ್​ಪೆಕ್ಟರ್​ ಅವರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಶಾಸಕ ಗೌರಿಶಂಕರ್ ಕೇಳಿದ್ದ ಅನುಮತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರಾಕರಿಸಿದ್ದಾರೆ.

ಕೋವಿಡ್-19 ರೋಗದ ಹಿನ್ನೆಲೆಯಲ್ಲಿ ಹೆಚ್ಚಿನ ಜನ ಸೇರಿದಲ್ಲಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಮತ್ತು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಅನುಮತಿ ನಿರಾಕರಿಸಿರುವುದಾಗಿ ತಿಳಿಸಿದ್ದಾರೆ.

ಜೂನ್ 12ರಂದು ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಅದನ್ನು ತಡೆಯುವಲ್ಲಿ ತುಮಕೂರು ಗ್ರಾಮಾಂತರ ಸರ್ಕಲ್ ಇನ್ಸ್​ಪೆಕ್ಟರ್​ ಮತ್ತು ಗ್ರಾಮಾಂತರ ಠಾಣೆಯ ಪೊಲೀಸ್​ ಸಬ್​ ಇನ್ಸ್‌ಪೆಕ್ಟರ್ ಸಂಪೂರ್ಣ ವಿಫಲರಾಗಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಬೇಕು, ಅಲ್ಲದೇ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲು ಅನುಮತಿಗಾಗಿ ಶಾಸಕ ಗೌರಿಶಂಕರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಜೂನ್ 13ರಂದು ಪತ್ರ ಬರೆದಿದ್ದರು.

ABOUT THE AUTHOR

...view details