ತುಮಕೂರು:ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಗಂಗಾ ಮಠದ ಆವರಣದಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ ಸಂಖ್ಯೆ 139ರಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಮತದಾನ ಮಾಡಿದರು.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ಪ್ರಜಾಪ್ರಭುತ್ವವನ್ನು ಬೇರು ಮಟ್ಟದಲ್ಲಿ ಗಟ್ಟಿಗೊಳಿಸುವಂತಹದ್ದು. ಸಂವಿಧಾನ ನಮಗೆ ಹಕ್ಕು ಮತ್ತು ಕರ್ತವ್ಯಗಳನ್ನು ಕೊಟ್ಟಿದೆ. ನಾವು ಸಂವಿಧಾನದ ಆಶಯಗಳಿಗೆ ತಕ್ಕಂತೆ ಬದುಕಬೇಕಾಗಿದೆ. ಹಕ್ಕುಗಳನ್ನು ಬಯಸುವ ರೀತಿಯಲ್ಲಿ ಹಕ್ಕನ್ನು ಚಲಾಯಿಸಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ ಎಂದರು.