ತುಮಕೂರು : ತಾಲೂಕು ಪಂಚಾಯಿತಿ ಆವರಣದಲ್ಲಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಮತ್ತು ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ತಾಲೂಕು ಪಂಚಾಯಿತಿ ಸದಸ್ಯರ ನಡುವೆ ಗೊಂದಲ ಸೃಷ್ಟಿಯಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆದಿದೆ.
ತುಮಕೂರು ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಅಧ್ಯಕ್ಷೆ ಕವಿತಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಸಲಾಯಿತು.
ತುಮಕೂರು ತಾಲ್ಲೂಕು ಪಂಚಾಯಿತಿ ಸಭೆಯಲ್ಲಿ ಸದಸ್ಯರ ಗಲಾಟೆ ಸಭೆಯಲ್ಲಿ ಮೊದಲಿಗೆ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು. ಈ ವೇಳೆ ತಾಲೂಕು ಪಂಚಾಯಿತಿಯ ಕೆಲ ಸದಸ್ಯರು ನಿಸ್ಪಕ್ಷಪಾತವಾಗಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸದಸ್ಯರ ನೇಮಕ ಮತ್ತು ಹಣಕಾಸು ಸ್ಥಾಯಿ ಸಮಿತಿ ಸದಸ್ಯರ ನೇಮಕ ಚುನಾವಣೆ ನಡೆಯುತ್ತಿಲ್ಲ ಎಂದು ಆರೋಪಿಸಿ ಸಭಾಂಗಣದಲ್ಲಿಯೇ ಸದಸ್ಯರುಗಳು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ಆನಂತರ ಅಧ್ಯಕ್ಷೆ ಕವಿತಾ ರಮೇಶ್ ಹಾಗೂ ಉಪಾಧ್ಯಕ್ಷ ಶಾಂತಕುಮಾರ್ ಸದಸ್ಯರನ್ನು ಸಮಾಧಾನಪಡಿಸಿ, ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಿ, ಸಭೆಯು ಸರಾಗವಾಗಿ ನಡೆಯುವಂತೆ ನೋಡಿಕೊಂಡರು.