ತುಮಕೂರು: ರಸ್ತೆ ವಿಭಜಕವನ್ನು ದಾಟಿ ಕಾರು ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬೈಪಾಸ್ ಬಳಿ ಇಂದು ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ರಘು (27) ಸಂತೋಷ್ (21) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಕಾರಿನಲ್ಲಿದ್ದು, ಟಿಟಿ ವಾಹನದಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ರಸ್ತೆ ವಿಭಜಕ ದಾಟಿ ಟಿಟಿ ವಾಹನಕ್ಕೆ ಕಾರು ಡಿಕ್ಕಿ: ಇಬ್ಬರು ದುರ್ಮರಣ, ಹಲವರಿಗೆ ಗಾಯ - ಟೆಂಪೋ ಟ್ರಾವೆಲರ್ ಮತ್ತು ಕಾರು ಅಪಘಾತ
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬೈಪಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ರಸ್ತೆ ವಿಭಜಕ ದಾಟಿ ಟಿಟಿ ವಾಹನಕ್ಕೆ ಕಾರು ಡಿಕ್ಕಿ: ಇಬ್ಬರು ದುರ್ಮರಣ, ಹಲವರಿಗೆ ಗಾಯ
ಚಿಕ್ಕಮಗಳೂರಿನಿಂದ ಬೆಂಗಳೂರು ಕಡೆಗೆ ಕಾರು ಸಂಚರಿಸುತ್ತಿತ್ತು. ಟಿಟಿ ವಾಹನ ಬೆಂಗಳೂರಿನಿಂದ ಧರ್ಮಸ್ಥಳ ಕಡೆ ಹೊರಟಿತ್ತು ಎಂದು ತಿಳಿದುಬಂದಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ನಿವೇಶನ ಒತ್ತುವರಿ ವಿಚಾರಕ್ಕೆ ಗಲಾಟೆ: ಮಹಿಳೆಯರ ಮೇಲೆ ಹಲ್ಲೆ ಆರೋಪ