ತುಮಕೂರು: ಜಿಲ್ಲೆಯಲ್ಲಿ 28,000 ಇದ್ದ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಪ್ರಸ್ತುತ 19,000ಕ್ಕೆ ಇಳಿದಿದ್ದು, ಕೆಂಪು ವಲಯದಲ್ಲಿದ್ದ ಜಿಲ್ಲೆಯು ಕಿತ್ತಳೆ ವಲಯಕ್ಕೆ ಬಂದಿದೆ.
ಪಾಸಿಟಿವ್ ಪ್ರಕರಣಗಳು ಇಳಿಮುಖ:
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲಾ ಜಿಲ್ಲೆಗಳ ಪರಿಶೀಲನೆ ಕೈಗೊಂಡ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ಉತ್ತಮ ಕಾರ್ಯ ನಿರ್ವಹಣೆಯಿಂದಾಗಿ ಕೊರೊನಾ ಅಬ್ಬರ ದಿನೆ ದಿನೇ ತಗ್ಗಿ ಕಿತ್ತಲೆ ವಲಯಕ್ಕೆ ಬಂದಿರುವುದು ಒಳ್ಳೆಯ ಸೂಚನೆ. ಮೇ 15 ರಿಂದ ವರದಿಯಾಗಿರುವ ಕೋವಿಡ್ ಸೋಂಕು ಪ್ರಕರಣಗಳನ್ನು ಅವಲೋಕಿಸಿದಾಗ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿವೆ. ಕಳೆದ ಮೇ 15 ರಂದು 42.29%ರಷ್ಟಿದ್ದ ಸೋಂಕಿತರ ಸಂಖ್ಯೆ ಮೇ 23 ರಂದು 31.66%ಕ್ಕೆ ಇಳಿದಿದೆ ಎಂದರು.
ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸುವ ನಿರ್ಧಾರ:
ಗ್ರಾಮಗಳಲ್ಲಿ ಹರಡುತ್ತಿರುವ ಕೊರೊನಾ ಸೋಂಕಿನ ಪ್ರಸರಣ ತಡೆಗೆ ಜಿಲ್ಲಾಡಳಿತದ ಜೊತೆಗೆ ಜನರ ಸಹಕಾರ ಅಗತ್ಯ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚುತ್ತಿರುವುದಿಂದ ಹಳ್ಳಿಗಳ ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತಿದೆ. ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸುವ ನಿರ್ಧಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಸುಧಾರಣೆಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಬೆಳಗಾವಿಯಲ್ಲಿ ಪ್ರತಿ 100 ರಲ್ಲಿ 33 ಜನರಿಗೆ ಸೋಂಕು: ಗುಣಮುಖ ಪ್ರಮಾಣ ದುಪ್ಪಟ್ಟು