ತುಮಕೂರು: ಭಾರತೀಯ ಜೀವ ವಿಮಾ ನಿಗಮ (LIC) ಬಾಂಡ್ ಕುರಿತು ಮಾಹಿತಿ ನೀಡುವ ನೆಪದಲ್ಲಿ ಅಪ್ರಾಪ್ತೆಯನ್ನು ಕರೆದುಕೊಂಡು ಹೋಗಿರುವ ಇಬ್ಬರು ದುರುಳರು ಲೈಂಗಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.