ಕರ್ನಾಟಕ

karnataka

ETV Bharat / state

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು - ತುಮಕೂರು ಅಪರಾಧ ಸುದ್ದಿ

ಆಟವಾಡುತ್ತಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರಿನ ಮಧುಗಿರಿ ತಾಲೂಕಿನಲ್ಲಿ ನಡೆದಿದೆ.

children died
ಮಕ್ಕಳ ಸಾವು

By

Published : Aug 2, 2020, 3:06 PM IST

ತುಮಕೂರು:ಕೃಷಿ ಹೊಂಡಕ್ಕೆ ಬಿದ್ದು ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಮರಿತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕೃಷ್ಣಪ್ಪ ಮತ್ತು ಅರುಣ ದಂಪತಿಯ ಮಕ್ಕಳಾದ ಶರತ್ (4), ಲೋಚನ (4) ಎಂಬವರು ಮೃತ ದುರ್ದೈವಿಗಳಾಗಿದ್ದಾರೆ.

ಮಕ್ಕಳ ಸಾವು

ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಮಕ್ಕಳು ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದಾರೆ. ಅಲ್ಲಿಯೇ ಕೆಲಸ ಮಾಡುತ್ತಿದ್ದ ಪೋಷಕರು ಕೃಷಿ ಹೊಂಡದ ಸಮೀಪ ಧಾವಿಸುವ ಮೊದಲೇ ಮೃತಪಟ್ಟಿದ್ದಾರೆ.

ಈ ಯ ತಿಳಿದು ಕೃಷಿ ಹೊಂಡದ ಬಳಿ ನೂರಾರು ಗ್ರಾಮಸ್ಥರು ಜಮಾಯಿಸಿದ್ದು, ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details