ತುಮಕೂರು: ಹೆಣ್ಣು ಮಕ್ಕಳಿಬ್ಬರೇ ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿರುವ ಘಟನೆ ತುಮಕೂರಿನಲ್ಲಿ ನಿನ್ನೆ ನಡೆದಿದೆ. ಅನಾರೋಗ್ಯದಿಂದ ಗಂಗಾಧರ್ ಮೃತಪಟ್ಟಿದ್ದರು. ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಇಬ್ಬರು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಸಹ ಯಾವುದರಲ್ಲೂ ಕಡಿಮೆ ಇಲ್ಲ ಎನ್ನುವ ಕೊರಗು ನಿವಾರಿಸಿ, ಸಮಾಜಕ್ಕೆ ಮಾದರಿಯಾಗಿದ್ದಾರೆ.
ತುಮಕೂರು: ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿದ ಪುತ್ರಿಯರು - ಹೆಣ್ಣು ಮಕ್ಕಳಿಬ್ಬರೇ ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ
ತಂದೆ ತಾಯಿಯ ಚಿತೆಗೆ ಪುತ್ರರೇ ಅಗ್ನಿಸ್ಪರ್ಶ ಮಾಡಬೇಕಾದ ಸಂಪ್ರದಾಯ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ, ಇಂತಹ ಪದ್ಧತಿಯನ್ನ ಧಿಕ್ಕರಿಸಿ ತುಮಕೂರಿನಲ್ಲಿ ಹೆಣ್ಣು ಮಕ್ಕಳಿಬ್ಬರು ತಮ್ಮ ತಂದೆಯ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಿದ್ದಾರೆ.
ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿದ ಪುತ್ರಿಯರು
ಇದನ್ನೂ ಓದಿ:ಸಾವಿನಲ್ಲೂ ಸ್ವಾಭಿಮಾನ; 20 ವರ್ಷದ ಮುಂಚಿತವಾಗಿ ಸಮಾಧಿ ನಿರ್ಮಾಣ - ಇಂದು ಅಂತ್ಯ ಸಂಸ್ಕಾರ!
ಗಂಗಾಧರ್ ಅವರು ಜೀವಿತಾವಧಿಯಲ್ಲಿ ಅತ್ಯಂತ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು. ತುಮಕೂರಿನ ಚಿಕ್ಕಪೇಟೆಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಮಂಡಳಿಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಕ್ಕಳಿರಲಿಲ್ಲ.
Last Updated : Oct 15, 2022, 12:18 PM IST