ತುಮಕೂರು:ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಸಂಭವಿಸಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್, ತುಮಕೂರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ತಿಪಟೂರು ಬಳಿ ಕೆಎಸ್ಆರ್ಟಿಸಿ ಬಸ್-ಕಾರು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು - ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಬಸ್ ಅಪಘಾತ
ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಬೀಕರ ಅಪಘಾತ- ಇಬ್ಬರು ದುರ್ಮರಣ- ತಿಪಟೂರು ತಾಲೂಕಿನಲ್ಲಿ ದುರ್ಘಟನೆ
ಕೆಎಸ್ಆರ್ಟಿಸಿ ಬಸ್-ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು
ಮತ್ತಿಹಳ್ಳಿಯ ತಿರುವಿನಲ್ಲಿ ಅವಘಡ ಸಂಭವಿಸಿದ್ದು, ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನವಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.