ಕರ್ನಾಟಕ

karnataka

ETV Bharat / state

ತುಮಕೂರು: ಎರಡು ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು - ಈಟಿವಿ ಭಾರತ್ ಕನ್ನಡ ಸುದ್ದಿ

ಎರಡು ಬಸ್​ಗಳ ನಡುವೆ ಸಿಲುಕಿ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಕೆಎಸ್​ಆರ್​ಟಿಸಿ ಬಸ್​ ನಿಲ್ಧಾಣದಲ್ಲಿ ಇಂದು ನಡೆಯಿತು.

ಪುಟ್ಟತಾಯಮ್ಮ(60) ಹಾಗೂ ಪಂಕಜ (55)
ಪುಟ್ಟತಾಯಮ್ಮ(60) ಹಾಗೂ ಪಂಕಜ (55)

By ETV Bharat Karnataka Team

Published : Sep 15, 2023, 7:53 PM IST

ತುಮಕೂರಿನಲ್ಲಿ ಭೀಕರ ಅವಘಡ

ತುಮಕೂರು : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿಂದು ಎರಡು ಬಸ್​ಗಳ ನಡುವೆ ಸಿಲುಕಿ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ(60) ಹಾಗೂ ಪಂಕಜ(55) ಮೃತರು.

ಇಬ್ಬರು ತಮ್ಮ ನೆರೆಹೊರೆಯವರೊಂದಿಗೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಲಕ್ಷ್ಮಿ ದೇವಾಲಯಕ್ಕೆ ಹೊರಟಿದ್ದರು. ಶುಕ್ರವಾರ ಬೆಳಗ್ಗೆ ನಗರದ ಬಸ್ ನಿಲ್ದಾಣದಲ್ಲಿ ಕೊರಟಗೆರೆಯ ಬಸ್ ಹತ್ತಲು ಮುಂದಾದಾಗ ಗೌರಿಬಿದನೂರು ಮತ್ತು ಕೊರಟಗೆರೆಯ ಬಸ್​ಗಳ ನಡುವೆ ಸಿಲುಕಿ ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೇವರ ದರ್ಶನಕ್ಕೆ ಬಂದಿದ್ದರು:ಉಚಿತ ಬಸ್ ಪ್ರಯಾಣದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಕೆಲವು ಮಹಿಳೆಯರು ಧಾರ್ಮಿಕ ಕ್ಷೇತ್ರಗಳ ದರ್ಶನಕ್ಕೆಂದು ಬಂದಿದ್ದರು. ಅದರಂತೆ, ಇಂದು ಗೊರವನಹಳ್ಳಿಗೆ ಹೊರಟಿದ್ದರು. ಆದರೆ ಬಸ್ ಹತ್ತುವ ಪೈಪೋಟಿಯಲ್ಲಿ ಬಸ್‌ಗಳ ನಡುವೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಕೆಎಸ್‌ಆರ್‌ಆರ್‌ಟಿಸಿ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಮಹಿಳೆ ಸಾವು (ಇತ್ತೀಚಿನ ಘಟನೆಗಳು):ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಆಕೆ ಸಾವನ್ನಪ್ಪಿದ ದುರ್ಘಟನೆ (ಜುಲೈ 17-2023) ನಡೆದಿತ್ತು. ಕೋಡಿಗೆಹಳ್ಳಿ ನಿವಾಸಿ ಮುನಿಯಮ್ಮ (60) ಮೃತರು. ಪೊಲೀಸರು ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದರು. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕ್ಯಾಂಟರ್​ಗೆ ಕಾರು ಡಿಕ್ಕಿ; ತಾಯಿ-ಮಗ ಸಾವು: ಕೊಪ್ಪಳ ತಾಲೂಕಿನ ಮಂಗಳಪುರ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಲಾರಿಗೆ ಬೈಕೊಂದು ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜೂನ್​ 12 ರ ಸೋಮವಾರ ರಾತ್ರಿ ನಡೆದಿತ್ತು. ಗದಗ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡದ ಪುಟ್ಟರಾಜು ವಸ್ತ್ರದ (46) ಹಾಗೂ ಗಂಗಮ್ಮ ವಸ್ತ್ರದ (70) ಮೃತರು. ಗಜೇಂದ್ರಗಡದಿಂದ ಕೊಪ್ಪಳ ಮಾರ್ಗವಾಗಿ ಹೊಸಪೇಟೆಗೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಮಂಗಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಇಬ್ಬರ ತಲೆಗೂ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದರು. ಕೊಪ್ಪಳ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:Bengaluru accident: ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಮಹಿಳೆ ಸಾವು

ABOUT THE AUTHOR

...view details