ತುಮಕೂರು : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕಾಗಿ ದೇಶಾದ್ಯಂತ ನಿಧಿ ಸಂಗ್ರಹಣೆ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಕೋತಿತೋಪಿನ ದಲಿತ ಕಾಲೋನಿಯಲ್ಲಿ ಉಡುಪಿಯ ಕೃಷ್ಣ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ನಿಧಿ ಸಂಗ್ರಹಣೆ ಕಾರ್ಯಕ್ಕೆ ಚಾಲನೆ ನೀಡಿದರು.
ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಲ್ಲಿ ಶ್ರೀಗಳಿಗೆ ಪಾದ ಪೂಜೆ ನಡೆಸಿ ನಿಧಿ ಸಮರ್ಪಿಸಿದರು. ದಲಿತ ಕೇರಿಗೆ ಸ್ವಾಮೀಜಿ ಆಗಮಿಸುತ್ತಿದ್ದಂತೆ ಜೈ ಶ್ರೀರಾಮ್ ಎಂಬ ಜಯಘೋಷಗಳು ಮೊಳಗಿದವು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಶ್ರೀಗಳಿಗೆ ಪುಷ್ಪವೃಷ್ಟಿ ಮಾಡಿ ಅದ್ಧೂರಿಯಾಗಿ ಸ್ವಾಗತಿಸಿದರು.