ತುಮಕೂರು:ಯುದ್ಧಪೀಡಿತ ಉಕ್ರೇನ್‌ನಿಂದ ಸುರಕ್ಷಿತವಾಗಿ ನಗರಕ್ಕೆ ಬಂದಿರುವ ಮೆಡಿಕಲ್ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಂದುವರಿಸಲು ಸಹಕಾರಿಯಾಗುವಂತೆ ಪೂರಕ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಅವರ ಬಳಿ ಅಲವತ್ತುಕೊಂಡರು.
ತುಮಕೂರು: ವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಅನುಮತಿಸಲು ವಿದ್ಯಾರ್ಥಿಗಳ ಮನವಿ - ವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಅನುಮತಿಸಲು ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳ ಮನವಿ
ಇಂದು ಸುಮಾರು 15 ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರನ್ನು ಭೇಟಿಯಾಗಿ, ಮೆಡಿಕಲ್ ಕಾಲೇಜುಗಳಲ್ಲಿ ವ್ಯಾಸಂಗ ಮುಂದುವರಿಸಲು ಸಹಕಾರಿಯಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಜಿಲ್ಲೆಯಿಂದ ಒಟ್ಟು 27 ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ವ್ಯಾಸಂಗ ಮಾಡಲು ತೆರಳಿದ್ದರು. ಅವರೆಲ್ಲರೂ ಸುರಕ್ಷಿತವಾಗಿ ವಾಪಸ್ ಬಂದಿದ್ದು, ಇಂದು ಸುಮಾರು 15 ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರನ್ನು ಭೇಟಿಯಾಗಿ ಮೆಡಿಕಲ್ ಕಾಲೇಜುಗಳಲ್ಲಿ ವ್ಯಾಸಂಗ ಮುಂದುವರಿಸಲು ಸಹಕಾರಿಯಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ವಿದ್ಯಾರ್ಥಿಗಳು ನೀಡಿರುವ ಮನವಿಯನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಸಚಿವರಿಗೆ ಕಳಿಸಿಕೊಡುತ್ತೇನೆ. ಸರ್ಕಾರದ ಸೂಚನೆಯಂತೆ ಅವರಿಗೆ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ಕಲ್ಪಿಸಲು ನಿರ್ಧರಿಸಲಾಗುವುದು ಎಂದರು.