ಕರ್ನಾಟಕ

karnataka

ETV Bharat / state

ಅಯೋಧ್ಯಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ: ಶ್ರೀ ಸಿದ್ದಲಿಂಗ ಸ್ವಾಮೀಜಿ

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ತಿಳಿಸಿದ್ದಾರೆ.

ಶ್ರೀ ಸಿದ್ದಲಿಂಗ ಸ್ವಾಮೀಜಿ
ಶ್ರೀ ಸಿದ್ದಲಿಂಗ ಸ್ವಾಮೀಜಿ

By ETV Bharat Karnataka Team

Published : Jan 19, 2024, 4:28 PM IST

ಅಯೋಧ್ಯೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ: ಶ್ರೀ ಸಿದ್ದಲಿಂಗ ಸ್ವಾಮೀಜಿ

ತುಮಕೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬೃಹತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಭದ್ರತಾ ದೃಷ್ಟಿಯಿಂದ ಹಾಗೂ ವಾತಾವರಣದಲ್ಲಿ ಚಳಿ ಇದೆ. ಹೀಗಾಗಿ ಅಲ್ಲಿನ ಕಾರ್ಯಕ್ರಮಕ್ಕೆ ಭಾಗವಹಿಸಲು ಸಾಧ್ಯವಾಗದೇ ಇರುವುದರಿಂದ ಮಠದಿಂದ ಯಾರನ್ನು ಕೂಡ ಕಳುಹಿಸುತ್ತಿಲ್ಲ. ಬದಲಾಗಿ ಸಂದೇಶವನ್ನು ಕಳುಹಿಸಲಾಗಿದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ತಿಳಿಸಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜನವರಿ 21ರಂದು ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಐದನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಗದುಗಿನ ತೋಂಟದಾರ್ಯ ಮಠದ ಶ್ರೀ ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳು ವಹಿಸುವರು. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧ್ಯಕ್ಷತೆ ವಹಿಸುವರು. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಮಗ್ರ ವ್ಯಕ್ತಿತ್ವ ಇರುವ ದೊಡ್ಡ ಶಕ್ತಿ ಹಾಗೂ ವ್ಯಕ್ತಿ ಎಂದರೆ ಅದು ಬಸವಣ್ಣನವರು ಆಗಿದ್ದಾರೆ. ಅವರಿಗೆ ಯಾವುದೇ ಸ್ಥಾನ ,ಗೌರವ ಕೊಟ್ಟರೂ ಅದು ಕಡಿಮೆ ಎಂದೇ ಭಾವಿಸಬೇಕಾಗುತ್ತದೆ. ಆದರೂ ಸರ್ಕಾರ ಕೆಲವರ ಒತ್ತಾಯದ ಮೇರೆಗೆ ಅವರಿಗೆ ಸಾಂಸ್ಕೃತಿಕ ನಾಯಕ ಎಂದು ಗೌರವ ನೀಡಿದೆ. ಅವರು ಕೇವಲ ರಾಜ್ಯಕ್ಕೆ ಹಾಗೂ ದೇಶಕ್ಕೆ ಸೀಮಿತವಾಗಿಲ್ಲ. ಇಡೀ ವಿಶ್ವಕ್ಕೆ ಅವರು ಮಾದರಿಯಾಗಿದ್ದಾರೆ ಎಂದು ಹೇಳಿದರು.

ಸಮಾಜದಲ್ಲಿ ಸಮಾನತೆ, ಸ್ವಾತಂತ್ರ್ಯವನ್ನು ಹಾಗೂ ಮಾನವೀಯ ಗುಣಗಳನ್ನು ಎತ್ತಿ ಹಿಡಿದಂತಹ ವ್ಯಕ್ತಿಯಾಗಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಂದಿನ ಕಾಲದಲ್ಲಿಯೇ ಬಸವಣ್ಣನವರು ತಮ್ಮ ಅನುಭವ ಮಂಟಪದ ಮೂಲಕ ಸಮಾಜಕ್ಕೆ ನೀಡಿದ್ದರು. ಅವರು ಸಾಮಾಜಿಕ, ಧಾರ್ಮಿಕ, ಆರ್ಥಿಕ ಹಾಗೂ ಎಲ್ಲ ಕ್ಷೇತ್ರಗಳಲ್ಲಿಯೂ ಅವರು ಕ್ರಾಂತಿಯನ್ನು ಮಾಡಿದ್ದವರಾಗಿದ್ದರು. ಸರ್ಕಾರ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಗುರುತಿಸಿರುವುದು ಸ್ವಾಗತಾರ್ಹವಾದದ್ದು ಎಂದು ತಿಳಿಸಿದ್ದಾರೆ.

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಶೃಂಗೇರಿ ಶ್ರೀಗಳು ಪಾಲ್ಗೊಳ್ಳುತ್ತಿಲ್ಲ: ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ಶೃಂಗೇರಿ ಮಠದ ಶ್ರೀಗಳು ಗೈರಾಗಲಿದ್ದಾರೆ. ಶ್ರೀಗಳ ಪರವಾಗಿ ಆಡಳಿತಾಧಿಕಾರಿ ತೆರಳಲಿದ್ದಾರೆ. ಈ ಬಗ್ಗೆ ಮಠ ತನ್ನ ಅಧಿಕೃತ ವೆಬ್‌ಸೈಟ್​ನಲ್ಲಿ ಮಾಹಿತಿ ನೀಡಿದೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಶಂಕರಾಚಾರ್ಯರು ಸ್ಥಾಪಿಸಿದ್ದ ನಾಲ್ಕು ಪೀಠಗಳು ರಾಮಲಲ್ಲನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಿಂದ ದೂರ ಉಳಿದಿವೆ. ಪೂರ್ಣವಾಗದ ಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆಗೆ ಮೂರು ಮಠಗಳು ಈ ಹಿಂದೆಯೇ ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ ಅಯೋಧ್ಯೆಗೆ ಹೋಗದಿರುವ ನಿರ್ಧಾರವನ್ನು ತಿಳಿಸಿದ್ದರು.

ಇದೀಗ ಶೃಂಗೇರಿ ಮಠ ಕೂಡಾ ಅಂತರ ಕಾಯ್ದುಗೊಂಡಿದೆ. ಕರ್ನಾಟಕದಲ್ಲಿ ನಾಲ್ವರು ರಾಮ ಮಂದಿರ ಟ್ರಸ್ಟ್​ನ ಸದಸ್ಯರಿದ್ದಾರೆ. ಇವರಲ್ಲಿ ಓರ್ವರಾಗಿರುವ ಶೃಂಗೇರಿ ಮಠದ ಶ್ರೀಗಳು ಕಾರ್ಯಕ್ರಮಕ್ಕೆ ಗೈರಾಗುತ್ತಿದ್ದಾರೆ.

ಇದನ್ನೂ ಓದಿ:ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಶೃಂಗೇರಿ ಶ್ರೀಗಳು ಪಾಲ್ಗೊಳ್ಳುತ್ತಿಲ್ಲ: ಮಠದಿಂದ ಮಾಹಿತಿ

ABOUT THE AUTHOR

...view details