ತುಮಕೂರು: ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರು ಹಲ್ಲೆ ಮಾಡಿ ಮೊಬೈಲ್ ಕಿತ್ತುಕೊಂಡು ಹೋಗಿರುವ ಘಟನೆ ನಗರದಲ್ಲಿ ನಡೆದಿದೆ. ಸಿದ್ದಗಂಗಾ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿ ಭೀಮಾಶಂಕರ ಹಲ್ಲೆಗೊಳಗಾದವರು.
ಬೆಂಗಳೂರು-ತುಮಕೂರು ರಸ್ತೆಗೆ ಹೊಂದಿಕೊಂಡಿರುವ ಹೆಚ್ಎಂಟಿ ಬಸ್ ನಿಲ್ದಾಣದ ಬಳಿ ಬಸ್ನಿಂದ ಇಳಿದು ಮಠಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಇಲ್ಲಿನ ಅಬರ್ಯಾನ್ ರೆಸಾರ್ಟ್ ಬಳಿ ಸ್ಕೂಟಿಯಲ್ಲಿ ಬಂದ ಮೂವರು ಕಿಡಿಗೇಡಿಗಳು ವಿದ್ಯಾರ್ಥಿ ಭೀಮಾ ಶಂಕರನ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ.