ತುಮಕೂರು:ಟಿವಿಎಸ್ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಆನೆಮಳೆ ಗೇಟ್ ಬಳಿ ಸಂಭವಿಸಿದೆ. ಮಗು ಸೇರಿದಂತೆ ಒಟ್ಟು ಮೂವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಪಘಾತ ನಡೆದಿದೆ.
ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಸಾವು, ಒಬ್ಬರ ಸ್ಥಿತಿ ಗಂಭೀರ - Accident in Tumkur
ಅಪಘಾತದಲ್ಲಿ ನಿಂಗಪ್ಪ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 9 ತಿಂಗಳ ಹೆಣ್ಣು ಮಗು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವಿಗೀಡಾಗಿದೆ.
ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿ
ಅಪಘಾತದಲ್ಲಿ ನಿಂಗಪ್ಪ (65) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 9 ತಿಂಗಳ ಹೆಣ್ಣು ಮಗು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವಿಗೀಡಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಗೆ ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೈಕ್ಗೆ ಡಿಕ್ಕಿ ಹೊಡೆದ ಲಾರಿ: ಕರೆ ಮಾಡಿ ಆಂಬ್ಯುಲೆನ್ಸ್ ಕರೆಸಿದ ಶಾಸಕ ರಾಜೂಗೌಡ