ಕರ್ನಾಟಕ

karnataka

ತುಮಕೂರಿನಲ್ಲಿ ಅವೈಜ್ಞಾನಿಕ ಕಾಮಗಾರಿ,ಸಾರ್ವಜನಿಕರಿಗೆ ಕಿರಿ-ಕಿರಿ

By

Published : Feb 13, 2020, 8:10 PM IST

ತುಮಕೂರಿನಲ್ಲಿ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಹೊಸದಾಗಿ ನಿರ್ಮಿಸುತ್ತಿರುವ ಚರಂಡಿಯ ಬಗ್ಗೆ ಹೇಳತೀರದ ಪರಿಸ್ಥಿತಿ ನಿರ್ಮಾಣವಾಗಿದ್ದು,ಜನರ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

dasdd
ತುಮಕೂರಿನಲ್ಲಿ ಅವೈಜ್ಞಾನಿಕ ಕಾಮಗಾರಿ,ಸಾರ್ವಜನಿಕರಿಗೆ ಕಿರಿ-ಕಿರಿ

ತುಮಕೂರು:ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಕಾಮಗಾರಿಗಳಿಂದ ನಗರದ ಕೆಲ ಭಾಗದಲ್ಲಿ ಸಾರ್ವಜನಿಕರಿಗೆ ನಿತ್ಯವೂ ಕಿರಿಕಿರಿ ಉಂಟಾಗುತ್ತಿದೆ.

ತುಮಕೂರಿನಲ್ಲಿ ಅವೈಜ್ಞಾನಿಕ ಕಾಮಗಾರಿ,ಸಾರ್ವಜನಿಕರಿಗೆ ಕಿರಿ-ಕಿರಿ

ಮಹಾತ್ಮಗಾಂಧೀಜಿ ರಸ್ತೆಗೆ ಹೊಂದಿಕೊಂಡಂತೆ ಇರುವ ವಿವೇಕಾನಂದ ರಸ್ತೆ ಹಾಗೂ ಬಾರ್ ಲೈನ್ ರಸ್ತೆ, ಜನರಲ್ ಕರಿಯಪ್ಪ ರಸ್ತೆಗಳಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ಪ್ರತಿದಿನವೂ ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದೆ. ಚೆಲುವೆ ಭವನದ ಪಕ್ಕದಲ್ಲಿರುವ ರಸ್ತೆಯಲ್ಲಿ ಕಾಮಗಾರಿ ಮುಗಿದಿದ್ದರೂ ವಾಹನ ಸವಾರರಿಗೆ ರಸ್ತೆಯನ್ನು ವ್ಯವಸ್ಥಿತವಾಗಿ ರೂಪಿಸುವಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳು ವಿಳಂಬ ಧೋರಣೆ ತೋರುತ್ತಿದ್ದಾರೆ. ಇನ್ನು ಪಾದಚಾರಿಗಳಿಗೆ ಫುಟ್ಪಾತ್ ಯಾವುದು,ರಸ್ತೆ ಯಾವುದು ಎಂಬುದು ತಿಳಿಯದಂತಾಗಿದೆ. ಜನರಲ್ ಕರಿಯಪ್ಪ ರಸ್ತೆಯಲ್ಲಿ 24x7 ಕುಡಿಯುವ ನೀರಿನ ಪೈಪ್ಲೈನ್ ಹಾಕಲಾಗಿದ್ದು, ಅದು ತಾತ್ಕಾಲಿಕವಾಗಿ ಚಾಲ್ತಿಯಲ್ಲಿದೆ. ಆದರೆ ಅದನ್ನು ಸರಿಯಾಗಿ ನಿರ್ವಹಣೆ ಮಾಡದೆ ಇರುವುದರಿಂದ ಚರಂಡಿಯಲ್ಲಿ ನೀರು ಸೋರಿಕೆಯಾಗುತ್ತಿದೆ. ಕಾಮಗಾರಿಗಳು ಪೂರ್ಣಗೊಳ್ಳುವ ಮುಂಚೆಯೇ ಅಧಿಕಾರಿಗಳು ಎಚ್ಚೆತ್ತುಕೊಂಡು ಸರಿಯಾದ ರೀತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕಿದೆ ಇಲ್ಲವಾದರೆ ಸರ್ಕಾರದ ಹಣ ವ್ಯರ್ಥವಾಗುತ್ತದೆ.

ಇನ್ನು ಚರಂಡಿ ನಿರ್ಮಿಸಲು ಕಳೆದ 8 ತಿಂಗಳ ಹಿಂದೆ ಅಗೆಯಲಾಗಿದ್ದು,ಇಲ್ಲಿಯವರೆಗೂ ಕಾಮಗಾರಿ ಪೂರ್ಣಗೊಳಿಸಿಲ್ಲ. ಚರಂಡಿಯಲ್ಲಿ ನಿಂತ ನೀರಿನಿಂದ ಕೆಟ್ಟ ವಾಸನೆ ಬರುತ್ತಿದೆ. ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದರ ಜೊತೆಗೆ ರಸ್ತೆಯ ಎರಡೂ ಭಾಗಗಳಲ್ಲಿ ವಾಹನಗಳನ್ನು ನಿಲುಗಡೆ ಇರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

ABOUT THE AUTHOR

...view details