ತುಮಕೂರು: ಸಿದ್ದಗಂಗಾ ಮಠದ ಮಕ್ಕಳಿಗೆ ಇಂದು ವ್ಯಾಕ್ಸಿನ್ ನೀಡಲಾಯಿತು. ಕೊರೊನಾ ಸೋಂಕು ಹರಡುವಿಕೆ ಭೀತಿ ನಡುವೆಯೂ ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಮಠದ ಮಕ್ಕಳೆಲ್ಲ ತಮ್ಮ ಊರುಗಳಿಗೆ ತೆರಳಿದ್ದಾರೆ. ಆದ್ರೆ ಪೋಷಕರಿಲ್ಲದ ಅನಾಥ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಮಠದಲ್ಲಿಯೇ ಉಳಿದುಕೊಂಡಿದ್ದಾರೆ. ಅಂತಹ ಮಕ್ಕಳಿಗೆ ಇಂದು ವ್ಯಾಕ್ಸಿನ್ ನೀಡುವ ವ್ಯವಸ್ಥೆ ಮಾಡಲಾಗಿತ್ತು.
ಸಿದ್ದಗಂಗಾ ಮಠದ ಮಕ್ಕಳಿಗೆ ಲಸಿಕೆ... ನಿತ್ಯ 100 ವಿದ್ಯಾರ್ಥಿಗಳಿಗೆ Vaccine - ಮಕ್ಕಳಿಗೆ ಲಸಿಕೆ
ಸಿದ್ದಗಂಗಾ ಮಠದಲ್ಲಿ ಸದ್ಯ (ಕೋವಿಡ್ ಸಂದರ್ಭ) 250 ಮಕ್ಕಳು ಉಳಿದುಕೊಂಡಿದ್ದಾರೆ. ಹಾಗಾಗಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇಂದು ವ್ಯಾಕ್ಸಿನ್ ನೀಡಲಾಯಿತು.
ಸಿದ್ದಗಂಗಾ ಮಠದ ಮಕ್ಕಳಿಗೆ ಲಸಿಕೆ
ಮಠದಲ್ಲಿ ಕೋವಿಡ್ ಸಂದರ್ಭದಲ್ಲಿ 250 ಮಕ್ಕಳು ಉಳಿದುಕೊಂಡಿದ್ದಾರೆ. ಅಂತಹ ಮಕ್ಕಳ ಆರೋಗ್ಯದ ದೃಷ್ಟಿಯಿಂದ ವ್ಯಾಕ್ಸಿನ್ ನೀಡುವಂತೆ ಜಿಲ್ಲಾಡಳಿತಕ್ಕೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಕೇಳಿದ್ದರು. ಹೀಗಾಗಿ ನಿತ್ಯ 100 ಮಕ್ಕಳಂತೆ ವ್ಯಾಕ್ಸಿನ್ ನೀಡಲಾಗುತ್ತಿದೆ. ತಹಶೀಲ್ದಾರ್ ಮುಂದೆ ನಿಂತು ವೈದ್ಯಕೀಯ ಸಿಬ್ಬಂದಿಯೊಂದಿಗೆ ವ್ಯಾಕ್ಸಿನ್ ನೀಡುವ ವ್ಯವಸ್ಥೆ ಮಾಡಿದ್ದರು.
ಇದನ್ನೂ ಓದಿ:ಮಂಡ್ಯದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕ ಲೋಕಾರ್ಪಣೆ