ತುಮಕೂರು :ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಸಿದ್ದಗಂಗಾ ಮಠದ ಸಮೀಪದ ರೈಲ್ವೆ ಟ್ರ್ಯಾಕ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.
ಸುಮಾರು ಅರ್ಧ ಗಂಟೆಗಳ ಕಾಲ ರೈಲ್ವೆ ಟ್ರ್ಯಾಕ್ ಮೇಲೆ ತಮ್ಮ ಬೆಂಬಲಿಗರೊಂದಿಗೆ ಧರಣಿ ನಡೆಸಿದರು. ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಬಳಸಿಕೊಂಡು ಅನೇಕ ಮಂದಿ ಉನ್ನತ ಮಟ್ಟದಲ್ಲಿ ಅಧಿಕಾರವನ್ನು ಪಡೆದಿದ್ದಾರೆ. ಅನೇಕ ವರ್ಷಗಳಿಂದ ಬೇಡಿಕೆಯಲ್ಲಿರುವ ಶ್ರೀ ಶಿವಕುಮಾರ ಸ್ವಾಮಿಜಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ ಆದರೆ ಈ ಬಗ್ಗೆ ಯಾರೂ ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂದರು.