ತುಮಕೂರು:ಖಾತೆ ವರ್ಗಾವಣೆ ಮಾಡಿಕೊಡಲು 20,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಕೆ.ಬಿ.ಲೋಕೇಶ್ ಬಂಧಿತ ಗ್ರಾಮ ಲೆಕ್ಕಾಧಿಕಾರಿ. ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದ ಸತೀಶ್ ಎಂಬುವವರು ತಮ್ಮ ತಾಯಿ ಹಾಗೂ ದೊಡ್ಡಪ್ಪನ ಹೆಸರಿಗೆ ಪೌತಿ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಖಾತೆ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ ಕೆ.ಬಿ.ಲೋಕೇಶ್ 20,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ.