ತುಮಕೂರು: ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆ ಜಾರಿಯಲ್ಲಿರುವ ವೀಕೆಂಡ್ ಕರ್ಪ್ಯೂ ನಿಯಮ ಮೀರಿ ಓಡಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಿ 112 ವಾಹನ ವಶಪಡಿಸಿಕೊಳ್ಳಲಾಗಿದೆ.
ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘನೆ : ತುಮಕೂರಿನಲ್ಲಿ 112 ವಾಹನ ಸೀಜ್ - ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ
ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಮನವಿ ಮಾಡಿದ್ದಾರೆ..
ತುಮಕೂರಿನಲ್ಲಿ 112 ವಾಹನಗಳು ಸೀಜ್
ತುಮಕೂರು 52, ಕುಣಿಗಲ್ 47, ಮಧುಗಿರಿ 5, ತಿಪಟೂರು 13, ಶಿರಾದಲ್ಲಿ 2 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.
ಜಿಲ್ಲೆಯಾದ್ಯಂತ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ಚೆಕ್ಪೋಸ್ಟ್ ತೆರೆದು ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಮನವಿ ಮಾಡಿದ್ದಾರೆ.