ತುಮಕೂರು: ತೈಲ ಬೆಲೆ ನಿರಂತರ ಏರಿಕೆ ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತೈಲ ಬೆಲೆ ನಿರಂತರ ಏರಿಕೆ ಖಂಡಿಸಿ ಪ್ರತಿಭಟನೆ
ತೈಲ ಬೆಲೆ ನಿರಂತರ ಏರಿಕೆ ಖಂಡಿಸಿ ತುಮಕೂರು ನಗರದ ಬಿಎಸ್ಎನ್ಎಲ್ ಕಚೇರಿ ಎದುರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಬಿಎಸ್ಎನ್ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಇಂಧನ ಬೆಲೆ ಹೆಚ್ಚಳದಿಂದಾಗಿ ಸಾರಿಗೆ ವೆಚ್ಚ ಸಾಕಷ್ಟು ದುಬಾರಿಯಾಗಿದೆ. ಜನರು ಬಳಸುವ ಅಗತ್ಯ ವಸ್ತುಗಳು ಗಗನಕ್ಕೇರಿವೆ. ಬಡವರು ಜೀವನ ನಡೆಸುವುದು ದುರ್ಬಲವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ತಾಹಿರ್ ಹುಸೇನ್ ಮಾತನಾಡಿ, ಕೊರೊನಾ ಸೋಂಕಿನಿಂದಾಗಿ ಜನರು ತತ್ತರಿಸಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರ ಸಾರ್ವಜನಿಕರ ಸಂಕಷ್ಟವನ್ನು ಕಡಿಮೆ ಮಾಡುವ ಬದಲು ಇಂಧನ ಬೆಲೆ ಹೆಚ್ಚಳ ಮಾಡುವ ಮೂಲಕ ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂಧನಗಳ ಮೇಲೆ ಶೇಕಡಾ 30ರಷ್ಟು ತೆರಿಗೆ ವಿಧಿಸಿದ್ದು, ಜನರ ಬದುಕಿಗೆ ಕೊಳ್ಳಿ ಇಡಲು ಹೊರಟಿವೆ ಎಂದು ಆರೋಪಿಸಿದರು.