ತುಮಕೂರು:ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಉಪ್ಪಾರಹಳ್ಳಿ ತಾಂಡಾದಲ್ಲಿ ನಡೆದಿದೆ. ಬುಜ್ಜಿಬಾಯಿ (35)ಹಾಗೂ ಮಕ್ಕಳಾದ ಖುಷಿ (9) ಹರ್ಷಿತಾ (6) ಎಂಬುವರೆ ಮೃತಪಟ್ಟವರು. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ನಿತ್ಯ ಒಂದಿಲ್ಲೊಂದು ಕಾರಣಕ್ಕೆ ಪತಿ ವೆಂಕಟೇಶ್ ಜೊತೆ ಜಗಳ ನಡೆಯುತ್ತಿತ್ತು. ಶುಕ್ರವಾರ ರಾತ್ರಿಯಷ್ಟೆ ವೆಂಕಟೇಶ್ ಮದ್ಯ ಸೇವಿಸಿ ಬಂದು ಪತ್ನಿಯೊಂದಿಗೆ ಜಗಳವಾಡಿದ್ದ ಎನ್ನಲಾಗುತ್ತಿದೆ.