ಕರ್ನಾಟಕ

karnataka

By

Published : Jun 30, 2019, 6:21 PM IST

ETV Bharat / state

ಗುರುತು ಸಿಗದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ... ಬೆಂಕಿ ಹಚ್ಚಿ ಕೊಂದಿರುವ ಶಂಕೆ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಬಳಿ ಅಪರಿಚಿತ ಮಹಿಳೆಯ ಶವ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರಿಂದ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ.

ಸುಟ್ಟು ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ


ತುಮಕೂರು:ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ತುಂಬುಗನಹಳ್ಳಿ ರಸ್ತೆ ಬಳಿ ಮುಖದ ಭಾಗ ಸಂಪೂರ್ಣ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಸುಮಾರು 25 ರಿಂದ 30 ವರ್ಷ ವಯಸ್ಸಿನ ಮಹಿಳೆ ಎಂದು ಅಂದಾಜಿಸಲಾಗಿದೆ. ಮೈ ಮೇಲಿದ್ದ ಮಾಂಗಲ್ಯ ಸರವನ್ನು ವಶಕ್ಕೆ ಪಡೆದಿರುವ ಪೊಲೀಸರು, ಮಹಿಳೆಗೆ ಮದುವೆಯಾಗಿರಬಹುದೆಂದು ಊಹಿಸಿದ್ದಾರೆ.

ಈ ಸಂಬಂಧ ಕೊರಟಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

Tumakuru

ABOUT THE AUTHOR

...view details