ತುಮಕೂರು:ಜಿಲ್ಲೆಯಲ್ಲಿ 76 ವರ್ಷದ ಮಹಿಳೆಯೊಬ್ಬರು ಮಹಾಮಾರಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಸೋಂಕಿನಿಂದ ಸಾವನಪ್ಪಿದವರ ಸಂಖ್ಯೆ 4ಕ್ಕೇರಿದೆ.
ಮಹಾಮಾರಿ ಕೊರೊನಾಗೆ ಮಹಿಳೆ ಬಲಿ: ಈವರೆಗೆ ತುಮಕೂರಿನಲ್ಲಿ ಸಾವಿಗೀಡಾದವರೆಷ್ಟು? - ತುಮಕೂರು ಲೆಟೆಸ್ಟ್ ನ್ಯೂಸ್
ಮಹಿಳೆಯೊಬ್ಬರು ಮನೆಯಲ್ಲಿ ಅನಾರೋಗ್ಯದಿಂದ ಕುಸಿದುಬಿದ್ದ ಪರಿಣಾಮ, ಜೂ. 26ರಂದು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ , ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿದ್ದರು. ಸದ್ಯ ಇವರಿಗೆ ಸೋಂಕು ತಗುಲಿದ್ದದ್ದು ದೃಢಪಟ್ಟಿದೆ.
ತುಮಕೂರಿನ ಕೃಷ್ಣ ನಗರದಲ್ಲಿ ವಾಸವಾಗಿದ್ದ ಮಹಿಳೆ ತಮ್ಮ ಮನೆಯಲ್ಲಿ ಅನಾರೋಗ್ಯದಿಂದ ಕುಸಿದುಬಿದ್ದ ಪರಿಣಾಮ, ಜೂ. 26ರಂದು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿದ್ದರು. ಈ ಮಹಿಳೆಯ ಗಂಟಲು ದ್ರವದ ಸ್ಯಾಂಪಲ್ ಅನ್ನು ಜಿಲ್ಲಾಸ್ಪತ್ರೆಯಲ್ಲಿ ಜೂ. 24ರಂದು ತೆಗೆಯಲಾಗಿತ್ತು. ಇಂದು ಮಹಿಳೆಯ ಗಂಟಲು ದ್ರವ ಪರೀಕ್ಷೆಯ ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೃತ ಮಹಿಳೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ 7 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ದ್ವಿತೀಯ ಸಂಪರ್ಕಿತರಿಗಾಗಿ ಹುಡುಕಾಟ ನಡೆದಿದೆ.
ಜಿಲ್ಲೆಯಲ್ಲಿ 40 ವರ್ಷದ ಪುರುಷನಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವ್ಯಕ್ತಿ ಬೆಂಗಳೂರಿನಿಂದ ತುಮಕೂರಿಗೆ ಬಂದಿದ್ದು, ಇಂದು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಸದ್ಯ ಸೋಂಕು ದೃೃಢಪಟ್ಟಿದ್ದು, ಇವರನ್ನು ಕೋವಿಡ್19 ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದ್ದು, 32 ಮಂದಿ ಜಿಲ್ಲಾ ಕೋವಿಡ್19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 39 ಮಂದಿ ಈಗಾಗಲೇ ಗುಣಮುಖರಾಗಿ ಮನೆ ಸೇರಿದ್ದಾರೆ.