ತುಮಕೂರು:ತುಮಕೂರುಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ವಿವಿಧ ಕಡೆ ಜಾಗೃತಿ ಮೂಡಿಸುವಂತಹ ಗೋಡೆ ಬರಹಗಳನ್ನು ಬರೆಯಲಾಗುತ್ತಿದ್ದು ಅವೆಲ್ಲವೂ ಬಹುತೇಕ ತಪ್ಪು ಕನ್ನಡ ಪದಗಳಿಂದ ಕೂಡಿವೆ. ಹೀಗಾಗಿ, ಜನರ ಆಕ್ರೋಶಕ್ಕೆ ಕಾರಣವಾಗಿದೆ.
ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಪರಿಸರ, ಟ್ರಾಫಿಕ್ ರೂಲ್ಸ್, ಸಂಚಾರ ನಿಯಮಗಳು ಹಾಗೂ ಸ್ಮಾರ್ಟ್ ಸಿಟಿ ಕುರಿತ ಸಂದೇಶ ಸಾರುವ ಗೋಡೆ ಬರಹಗಳನ್ನು ಬರೆಯಲಾಗುತ್ತಿದೆ. ಆದರೇ ಬರಹಗಳಲ್ಲಿ ಕನ್ನಡ ಪದಗಳು ತಪ್ಪಾಗಿರುವುದರಿಂದ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಇನ್ನು ಕನ್ನಡ ಪದಗಳ ದೊಡ್ಡ ಅಕ್ಷರದಲ್ಲಿ ತಪ್ಪಾಗಿ ಬರೆಯುತ್ತಿದ್ದರೂ ಕೂಡ ಸ್ಮಾರ್ಟ್ ಸಿಟಿ ಅಧಿಕಾರಿಗಳು ಅಥವಾ ಮಹಾನಗರ ಪಾಲಿಕೆ ಸಿಬ್ಬಂದಿಗಳು ಇತ್ತ ಗಮನಹರಿಸದೆ ನಿರ್ಲಕ್ಷ್ಯ ತೋರಿಸಿರುವುದು ಸ್ಮಾರ್ಟ್ ಸಿಟಿ ಕಾರ್ಯವೈಖರಿಯ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ.