ತುಮಕೂರು:ದೇವಾಲಯದ ಸಮೀಪದಲ್ಲಿರುವ ಕಲ್ಯಾಣಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು ತರುಣ್ (16 ವರ್ಷ) ಎಂದು ಗುರುತಿಸಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿಯ ಲಕ್ಕನಹಳ್ಳಿ ಗ್ರಾಮದ ನಾಗಣ್ಣ ಎಂಬುವರ ಮಗನಾದ ಈತ ತಾಯಿಯೊಂದಿಗೆ ದೇಗುಲಕ್ಕೆ ಬಂದಿದ್ದ. ಕಲ್ಯಾಣಿ ಸಮೀಪ ತಾಯಿ ಗಂಗೆ ಪೂಜೆಯಲ್ಲಿ ನಿರತರಾಗಿದ್ದಾಗ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.