ತುಮಕೂರು : ಗಣೇಶ ನಿಮಜ್ಜನ ವೇಳೆ ಮೆರವಣಿಗೆಯಲ್ಲಿ ಡಿಜೆ ಬಳಸಲು ಅನುಮತಿ ನೀಡಬೇಕೆಂದು ಆಗ್ರಹಿಸಿ ಯುವಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.
ಗಣೇಶ ನಿಮಜ್ಜನ ವೇಳೆ ಡಿಜೆ ಬಳಸಲು ಅನುಮತಿಗಾಗಿ ಯುವಕರ ಆಗ್ರಹ.. - ಇತ್ತೀಚಿನ ತುಮಕೂರು ಸುದ್ದಿ
ಗುಬ್ಬಿ ತಾಲೂಕಿನ ವಿವಿಧೆಡೆ ಗಣೇಶೋತ್ಸವದ ವೇಳೆ ಡಿಜೆ ಬಳಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ, ಪಟ್ಟಣದಲ್ಲಿ ಮಾತ್ರ ಇದಕ್ಕೆ ನಿರ್ಬಂಧ ಹೇರಲಾಗಿದೆಯೆಂದು ಯುವಕರು ರಸ್ತೆ ತಡೆ ನಡೆಸಿ ಗುಬ್ಬಿಯಲ್ಲಿ ಪ್ರತಿಭಟನೆ ನಡೆಸಿದರು.
ಗಣೇಶೋತ್ಸವದ ವೇಳೆ ಡಿಜೆ ಬಳಸಲು ಅನುಮತಿಗಾಗಿ ಯುವಕರ ಆಗ್ರಹ
ರಾಷ್ಟ್ರೀಯ ಹೆದ್ದಾರಿ 206 ತಡೆದು ಯುವಕರು ಪೊಲೀಸ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.ಗುಬ್ಬಿ ತಾಲೂಕಿನ ವಿವಿಧೆಡೆ ಗಣೇಶೋತ್ಸವದ ವೇಳೆ ಡಿಜೆ ಬಳಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ, ಪಟ್ಟಣದಲ್ಲಿ ಮಾತ್ರ ಇದಕ್ಕೆ ನಿರ್ಬಂಧ ಹೇರಲಾಗಿದೆಯೆಂದು ಯುವಕರು ಆಕ್ರೋಶ ವ್ಯಕ್ತಪಡಿಸಿದರು.