ತುಮಕೂರು: ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿರುವ ಲತಾ ರವಿಕುಮಾರ್ ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಸ್ಥಾನ ಬಿಟ್ಟು ಕೊಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಆರೋಪಿಸಿದ್ದಾರೆ.
ಜಿ.ಪಂ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಲು ನಕಾರ; ಜೆಡಿಎಸ್ ಮಾತು ತಪ್ಪಿದೆ ಎಂದ ಬಿಜೆಪಿ - tumkur latest news 2020
2016ರಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ವೇಳೆ ತಲಾ 30 ತಿಂಗಳ ಅವಧಿಗೆ ಜೆಡಿಎಸ್ ಹಾಗೂ ಬಿಜೆಪಿ ಅಧಿಕಾರ ಹಂಚಿಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ 30 ತಿಂಗಳು ಅಧಿಕಾರ ನಡೆಸಿದ ಅಧ್ಯಕ್ಷರು ಇನ್ನುಳಿದ 30 ತಿಂಗಳ ಅಧಿಕಾರವನ್ನು ಬಿಜೆಪಿಗೆ ಬಿಟ್ಟು ಕೊಡುವಲ್ಲಿ ಮೀನಾ ಮೇಷ ಎಣಿಸುತ್ತಿದೆ ಎಂದು ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, 2016ರಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ವೇಳೆ ತಲಾ 30 ತಿಂಗಳ ಅವಧಿಗೆ ಜೆಡಿಎಸ್ ಹಾಗೂ ಬಿಜೆಪಿ ಅಧಿಕಾರ ಹಂಚಿಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮೊದಲಿಗೆ ಜೆಡಿಎಸ್ ಅಧ್ಯಕ್ಷರಾಗಿ ಲತಾ ರವಿಕುಮಾರ್ ಅಧಿಕಾರವಹಿಸಿಕೊಂಡಿದ್ದರು. ಆದರೆ 30 ತಿಂಗಳು ಅಧಿಕಾರ ನಡೆಸಿದ ಅಧ್ಯಕ್ಷರು ಇನ್ನುಳಿದ 30 ತಿಂಗಳ ಅಧಿಕಾರವನ್ನು ಬಿಜೆಪಿಗೆ ಬಿಟ್ಟು ಕೊಡುವಲ್ಲಿ ಮೀನಮೇಷ ಎಣಿಸುತ್ತಿದ್ದಾರೆ ಸಾಕಷ್ಟು ಬಾರಿ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಕೇಳಿದರೂ ಕೊಟ್ಟಿಲ್ಲ ಎಂದು ಆರೋಪಿಸಿದರು.
ಇದೀಗ ಜೆಡಿಎಸ್ ಪಕ್ಷದ ಜಿಪಂ ಸದಸ್ಯರ ಮುಖಂಡತ್ವದಲ್ಲಿಯೇ ಅಧ್ಯಕ್ಷರ ವಿರುದ್ಧ ಸಹಿ ಹಾಕಲಾಗಿದೆ. ಅಲ್ಲದೆ ಬಿಜೆಪಿಯ ಜಿಪಂ ಸದಸ್ಯರಾದ ಯಶೋದಮ್ಮ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂದು ಅವಿಶ್ವಾಸ ನಿರ್ಣಯಕ್ಕೆ ನಾವೆಲ್ಲರೂ ಸಹಿ ಹಾಕಿದ್ದೇವೆ ಎಂದು ತಿಳಿಸಿದರು. ಜೆಡಿಎಸ್ ಪಕ್ಷದವರು ಲತಾ ರವಿಕುಮಾರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ನಿರ್ಧರಿಸಿದ್ದಾರೆ. ಆದರೆ ಅಧ್ಯಕ್ಷರ ಪತಿ ರವಿಕುಮಾರ್ ವಿನಾಕಾರಣ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶಗೌಡ ಅವರ ವಿರುದ್ಧ ಹೇಳಿಕೆ ಕೊಡುತ್ತಿರುವುದು ಸೂಕ್ತವಲ್ಲ ಎಂದು ತಿಳಿಸಿದರು.