ಉಡುಪಿ:ಒಂದೇ ಜಾತಿ, ಒಂದೇ ದೇವರು ಎಂಬ ಚಿಂತನೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ 166 ಜನ್ಮ ದಿನವನ್ನು ಉಡುಪಿಯ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಸರಳವಾಗಿ ಆಚರಿಸಲಾಯಿತು.
ಉಡುಪಿಯಲ್ಲಿ ಸರಳವಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ 166 ಜನ್ಮದಿನ ಆಚರಣೆ
ಉಡುಪಿಯ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಸರಳವಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ 166 ಜನ್ಮ ದಿನವನ್ನು ಆಚರಿಸಲಾಯಿತು.
ಉಡುಪಿಯಲ್ಲಿ ಸರಳವಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ 166 ಜನ್ಮದಿನ ಆಚರಣೆ
ಬಿಲ್ಲವ ಸಮುದಾಯದ ಮುಖಂಡರು ನಾರಾಯಣ ಗುರುಗಳ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಗುರುಗಳ ಮಾರ್ಗದರ್ಶನದಂತೆ ಸಮಾಜವನ್ನು ಮುನ್ನಡೆಯಲು ಪ್ರತಿಯೊಬ್ಬರೂ ಪಣತೊಡಬೇಕು. ಇದು ದಿನದ ಕಾರ್ಯಕ್ರಮವಾಗದೇ, ಗುರುಗಳ ಜೀವನ ಮತ್ತು ತತ್ವಾದರ್ಶ ಪಾಲಿಸಬೇಕು ಎಂಬ ಸಂದೇಶ ಸಾರಲಾಯಿತು.
ಕೋವಿಡ್ ನಿಯಮದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ನಾರಾಯಣ ಗುರುಗಳ ಜಯಂತಿ ಆಚರಿಸಲಾಯಿತು.