ಕರ್ನಾಟಕ

karnataka

ETV Bharat / state

ಬೈಂದೂರಿನ ಗೋಳಿಹೊಳೆ ಗ್ರಾಮದಲ್ಲಿ 20 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಗೋಳಿಹೊಳೆ ಗ್ರಾಮದ ರವಿ ಶೆಟ್ಟಿ ಎಂಬವರ ತೋಟದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಗಿದೆ.

By

Published : Sep 30, 2020, 1:15 PM IST

python protection
ಬೈಂದೂರಿನ ಗೋಳಿಹೊಳೆ ಗ್ರಾಮದಲ್ಲಿ 20 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕು ಗೋಳಿಹೊಳೆ ಗ್ರಾಮದಲ್ಲಿ ಭಾರೀ ಗಾತ್ರದ ಹೆಬ್ಬಾವು ರಕ್ಷಣೆ ಮಾಡಲಾಗಿದೆ.

ಬೈಂದೂರಿನ ಗೋಳಿಹೊಳೆ ಗ್ರಾಮದಲ್ಲಿ 20 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಗ್ರಾಮದ ರವಿ ಶೆಟ್ಟಿ ಎಂಬವರ ತೋಟದಲ್ಲಿ ಭಾರೀ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು, ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಗಿದೆ. ತೋಟದಲ್ಲಿ ನಾಯಿಯನ್ನು ಹಿಡಿದು ನುಂಗುತ್ತಿದ್ದ ಸಂದರ್ಭದಲ್ಲಿ ರವಿ ಶೆಟ್ಟಿಯವರು ಹಾವಿನ ಬಾಯಿಂದ ನಾಯಿಯನ್ನು ಬಿಡಿಸಿದ್ದಾರೆ. ಸುಮಾರು 20 ಅಡಿ ಉದ್ದ 50 ಕೆಜಿಯಷ್ಟು ಭಾರ ಇರುವ ಹಾವಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಹಿಡಿಯಲಾಗಿದೆ.

ಗೋಳಿಹೊಳೆ ವಿಭಾಗಿಯ ಪ್ರಭಾರ ಅರಣ್ಯ ರಕ್ಷಕ ರಾಜೀವ. ಎಸ್ ಗೌಡರ ಸಹಾಯದೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.

ABOUT THE AUTHOR

...view details