ಉಡುಪಿ:ಜಿಲ್ಲೆಯಲ್ಲಿ ನಾಲ್ಕು ದಿನದಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮಣಿಪಾಲ ಕ್ಯಾಂಪಸ್ನಲ್ಲಿ ಒಟ್ಟು 95 ಪ್ರಕರಣಗಳು ಪತ್ತೆಯಾಗಿವೆ. ಮಣಿಪಾಲ ಕ್ಯಾಂಪಸ್ನ್ನು ಕಂಟೇನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ಉಡುಪಿ ಎಂಐಟಿ ಕ್ಯಾಂಪಸ್ನಲ್ಲಿ 95 ಕೊರೊನಾ ಪ್ರಕರಣ: ಕಂಟೇನ್ಮೆಂಟ್ ಝೋನ್ ಘೋಷಣೆ - Udupi District Hospital
ಮಣಿಪಾಲ ವಿಶ್ವವಿದ್ಯಾಲಯದ ಎಂಐಟಿ ಕ್ಯಾಂಪಸ್ನಲ್ಲಿ 95 ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿದೆ.
ಉಡುಪಿ ಜಿಲ್ಲಾ ಆಸ್ಪತ್ರೆ
ಎಂಐಟಿ ಕ್ಯಾಂಪಸ್ನ 5,000 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಒಟ್ಟು 95 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ನಗರ ಭಾಗದಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಸಾರ್ವಜನಿಕ ಸ್ಥಳ, ಸಮಾರಂಭಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸ್ಯಾನಿಟೈಸ್ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
Last Updated : Mar 18, 2021, 2:17 PM IST