ಕರ್ನಾಟಕ

karnataka

ETV Bharat / state

ಅದಮಾರು ಶ್ರೀಗಳ ಅಭಿಪ್ರಾಯದ ಮೇರೆಗೆ ಚರ್ಚಿತ ಪಠ್ಯ ಕೈ ಬಿಟ್ಟ ಶಿಕ್ಷಣ ಇಲಾಖೆ

ಉಡುಪಿಯ ಅದಮಾರು ಮಠದ ಈಶಪ್ರಿಯ ತೀರ್ಥರು ಆರನೇ ತರಗತಿಯ ಸಮಾಜಶಾಸ್ತ್ರ ಪಠ್ಯದಲ್ಲಿ ಹಿಂದೂ ಧಾರ್ಮಿಕ ನಂಬಿಕೆಗೆ ಘಾಸಿಯಾಗುವ ಅಂಶಗಳಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಆ ನಿರ್ದಿಷ್ಟ ಪಠ್ಯಕ್ರಮವನ್ನು ಕೈಬಿಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.

6th standard one chapter cancelled after admaru sri objection
ಚರ್ಚಿತ ಪಠ್ಯ ಕೈ ಬಿಟ್ಟ ಶಿಕ್ಷಣ ಇಲಾಖೆ

By

Published : Aug 25, 2020, 9:30 PM IST

Updated : Aug 26, 2020, 5:21 PM IST

ಉಡುಪಿ:ಆರನೇ ತರಗತಿಯ ಸಮಾಜಶಾಸ್ತ್ರ ಪಠ್ಯದಲ್ಲಿ ಹಿಂದೂ ಧಾರ್ಮಿಕ ನಂಬಿಕೆಗೆ ಘಾಸಿಯಾಗುವ ಅಂಶಗಳಿವೆ ಎಂಬ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಪಾಠವನ್ನು ಕೈ ಬಿಡಲು ಶಿಕ್ಷಣ ಸಚಿವರು ಆದೇಶಿಸಿದ್ದಾರೆ.

ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ಅಂಶಗಳನ್ನು ಮಕ್ಕಳಿಗೆ ಪಠ್ಯ ಬೋಧಿಸುವುದು ಎಷ್ಟು ಸರಿ ಅನ್ನೊ ವಿಚಾರ ಇತ್ತೀಚೆಗೆ ಚರ್ಚೆಗೀಡಾಗಿತ್ತು. ಈ ಕುರಿತು ಉಡುಪಿಯ ಅದಮಾರು ಮಠದ ಈಶಪ್ರಿಯ ತೀರ್ಥರು ಆಡಿಯೋ ಮೂಲಕ ತಮ್ಮ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದರು.

ವಿವಾದಕ್ಕೆ ಕಾರಣವಾದ ಪಠ್ಯದ ಸಾರಾಂಶ ಈ ರೀತಿ ಇದೆ:

‘ಉತ್ತರ ವೇದ ಕಾಲದಲ್ಲಿ ವೈದಿಕ ಆಚರಣೆಗಳಾದ ಯಾಗ-ಯಜ್ಞಗಳ ಹೆಸರಲ್ಲಿ ಕೃಷಿಗೆ ನೆರವಾಗುತ್ತಿದ್ದ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು. ಇದರಿಂದ ಆಹಾರದ ಉತ್ಪಾದನೆ ಕುಂಟಿತವಾಯ್ತು. ಯಾಗಗಳಿಗೆ ಆಹಾರ ಧಾನ್ಯ-ಹಾಲು-ತುಪ್ಪಗಳನ್ನು ಹಾಕಿದ ಪರಿಣಾಮ ಆಹಾರದ ಅಭಾವವೂ ಉಂಟಾಯ್ತು. ಯಾಗ ಯಜ್ಞಗಳಿಂದ ಮಾತ್ರ ಮುಕ್ತಿ ಸಾಧ್ಯ ಎಂಬ ನಂಬಿಕೆ ಜನರಲ್ಲಿ ಮನೆ ಮಾಡಿತ್ತು. ಸಂಸ್ಕೃತ ವೆಂಬ ಪುರೋಹಿತ ಭಾಷೆಯಲ್ಲಿ ಈ ಆಚರಣೆಗಳು ನಡೆಯುತ್ತಿದ್ದು ಜನ ಸಾಮಾನ್ಯರಿಗೆ ಇದು ಅರ್ಥವಾಗುತ್ತಿರಲಿಲ್ಲ. ಸರಳ ಮಾರ್ಗಗಳ ಮೂಲಕ ಮುಕ್ತಿ ಹೊಂದಲು ಹೊಸ ಧರ್ಮವನ್ನು ಜನ ಅಪೇಕ್ಷಿಸುತ್ತಿದ್ದರು' ಎಂದು ಈ ಪಠ್ಯದಲ್ಲಿ ಹೇಳಲಾಗಿತ್ತು.

ಚರ್ಚಿತ ಪಠ್ಯ ಕೈ ಬಿಟ್ಟ ಶಿಕ್ಷಣ ಇಲಾಖೆ

ಈಶಪ್ರಿಯ ತೀರ್ಥರು ಈ ವಿಚಾರಗಳನ್ನು ಆಕ್ಷೇಪಿಸಿ, ಯಾಗಗಳಿಗೆ ಮಹತ್ವ ಇತ್ತಾದರೂ, ಅದಕ್ಕೂ ಒಂದು ನಿಯಮ, ಇತಿ-ಮಿತಿಗಳಿತ್ತು , ಈ ಕುರಿತು ಭಾಗವತದಲ್ಲಿ ಉಲ್ಲೇಖವಿದೆ. ಎಲ್ಲಾ ಸಾಧಕರಿಗೂ ಯಾಗದಿಂದಲೇ ಮುಕ್ತಿ ಎಂಬ ಅಭಿಪ್ರಾಯ ಇರಲಿಲ್ಲ ಎಂದು 5 ಸಾವಿರ ವರ್ಷಗಳ ಹಿಂದೆ ಬಂದ ಭಾಗವತದಲ್ಲಿಯೇ ಹೇಳಿದೆ. ಹಾಗಾಗಿ ಪಠ್ಯದಲ್ಲಿರುವ ಮಾತು ಸರಿಯಲ್ಲ ಎಂದು ಆಡಿಯೋದಲ್ಲಿ ತಿಳಿಸಿದ್ದರು.

ಚರ್ಚಿತ ಪಠ್ಯ ಕೈ ಬಿಟ್ಟ ಶಿಕ್ಷಣ ಇಲಾಖೆ

ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆ ಪಠ್ಯವನ್ನೇ ಕೈ ಬಿಡೋದಾಗಿ ಹೇಳಿದ್ದಾರೆ. ಸಚಿವರು ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಈ ಪಾಠ ಪುಸ್ತಕ ಈ ವರ್ಷ ಪ್ರಕಟವಾಗಿದ್ದಲ್ಲ, ಆದರೂ ಈ ವರ್ಷ ಈ ಪಾಠವನ್ನು ಮಾಡದಿರುವಂತೆ ಆದೇಶ ಮಾಡ್ತೇನೆ, ಜೊತೆಗೆ ಮುಂದಿನ ವರ್ಷ ಪಠ್ಯ ಪುಸ್ತಕ ಪ್ರಕಟವಾಗುವಾಗ ಈ ಪಾಠ ತೆಗೆಸುತ್ತೇನೆ. ಈಗಾಗಲೇ ಪಠ್ಯ ಮುದ್ರಣವಾಗಿ ಮಕ್ಕಳಿಗೆ ತಲುಪಿದೆ. ಹಾಗಾಗಿ ಪಠ್ಯದಿಂದ ಹೊರತೆಗೆಯಲು ಆಗಲ್ಲ. ಈ ಬಗ್ಗೆ ವಿಷಾದವಿದೆ ಎಂದು ತಿಳಿಸಿದ್ದಾರೆ.

Last Updated : Aug 26, 2020, 5:21 PM IST

ABOUT THE AUTHOR

...view details