ಉಡುಪಿ: ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಓರ್ವ ಸಾವನ್ನಪ್ಪಿದ ಘಟನೆ ಕೋಟತಟ್ಟು ಪಡುಕರೆಯಲ್ಲಿ ನಡೆದಿದೆ. ಸಾಲಿಗ್ರಾಮ ಗೆಂಡೆಕೆರೆ ನಿವಾಸಿ ಗಾರೆಮೇಸ್ತ್ರಿ ಮಂಜುನಾಥ (38) ಮೃತ ವ್ಯಕ್ತಿ.
ಉಡುಪಿ: ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಓರ್ವ ಸಾವು, ಮತ್ತೋರ್ವನಿಗೆ ಗಾಯ - ಉಡುಪಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಓರ್ವ ಸಾವು
ಕಟ್ಟಡ ಕಾಮಗಾರಿ ವೇಳೆ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಟತಟ್ಟು ಪಡುಕರೆಯಲ್ಲಿ ನಡೆದಿದೆ.
ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಓರ್ವ ಸಾವು
ಕೋಟತಟ್ಟು ಪಡುಕರೆ ಶಿರಸಿ ಮಾರಿಕಾಂಬ ದೇವಸ್ಥಾನದ ಹಿಂಭಾಗದಲ್ಲಿ ಮನೆ ಕಟ್ಟಡ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಕುಸಿದಿದೆ. ಈ ಘಟನೆಯಲ್ಲಿ ಮಂಜುನಾಥ ಮೃತಪಟ್ಟರೆ, ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಚೇತನ್ (28) ಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋಟತಟ್ಟು ಪಡುಕರೆ ರಾಜಶೇಖರ್ ಹಂದೆ ಅವರ ನೂತನ ಮನೆ ಕಾಮಗಾರಿ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೋಟ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
TAGGED:
concrete slab collapsed