ಉಡುಪಿ:ಬಹು ಕೋಟಿ ಹಣ ವಂಚನೆ ಪ್ರಕರಣ ಸಂಬಂಧ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಬ್ಯಾಂಕ್ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಉಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ವಾರದ ಹಿಂದೆ ಬ್ಯಾಂಕಿನಲ್ಲಿ ಠೇವಣಿ ಇಟ್ಟಿರುವ ಗ್ರಾಹಕರು ಬ್ಯಾಂಕ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು.
ಈ ಘಟನೆ ಸಂಬಂಧ ವಂಚನೆ ಆರೋಪದ ಮೇಲೆ ಲಕ್ಷ್ಮಿ ನಾರಾಯಣ ಮೇಲೆ ಪ್ರಕರಣ ದಾಖಲಾಗಿತ್ತು. ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ಲಕ್ಷ್ಮಿ ನಾರಾಯಣನ್ನು ಬಂಧಿಸಿ, ಉಡುಪಿ ಜೆಎಂಎಫ್ಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.