ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕನೋರ್ವ ಪರಾರಿಯಾಗಿರುವ ಘಟನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಯುವತಿ ಮೃತಪಟ್ಟಿದ್ದಾಳೆ.
ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ಎಸ್ಕೇಪ್! - ಯುವತಿಯನ್ನ ಉಡುಪಿ ಆಸ್ಪತ್ರೆಗೆ ಬಿಟ್ಟು ಹೋದ ಯುವಕ
ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕೆಲವೇ ಕ್ಷಣಗಳಲ್ಲಿ ಯುವತಿ ಮೃತಪಟ್ಟಿದ್ದಾಳೆ.
ಚಿಂತಾಜನಕ ಸ್ಥಿತಿ
ನಿನ್ನೆ ಸಂಜೆ 6:30 ರ ಸುಮಾರಿಗೆ ರಿಕ್ಷಾದಲ್ಲಿ ಯುವತಿಯನ್ನು ಕರೆ ತಂದಿದ್ದ ಯುವಕ, ಯುವತಿಯ ಮನೆಯವರಿಗೆ ಕರೆ ಮಾಡಿ ವಿಷಯ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾನೆ. ಕೆಲಸ ಮತ್ತು ಶಿಕ್ಷಣಕ್ಕಾಗಿ ಉಡುಪಿಯ ಅಂಬಾಗಿಲಿನಲ್ಲಿ ವಾಸ್ತವ್ಯ ಹೂಡಿದ್ದ ಯುವತಿ, ಮೂಲತಃ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿದ್ದಳು.
ಯುವತಿಯನ್ನ ಆಸ್ಪತ್ರೆಗೆ ಬಿಟ್ಟು ಹೋಗಿದ್ದ ಪ್ರವೀಣ್ ಕುಂದರ್ಗಾಗಿ ಹಿರಿಯಡ್ಕ ಪೊಲೀಸರು ಶೋಧ ನಡೆಸುತ್ತಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.