ಉಡುಪಿ:ಪೋಷಕರಿಗೆ ಕರೆ ಮಾಡಿ ಅಪಹರಣವಾಗಿರುವುದಾಗಿ ಹೇಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಯುವಕನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವರುಣ್ ನಾಯಕ್ (25) ಎಂದು ಗುರುತಿಸಲಾಗಿದೆ.
ಈತ ತನ್ನ ಪೋಷಕರಿಗೆ ಕರೆ ಮಾಡಿ ಅಪಹರಣ ಆಗಿದೆ ಎಂದು ಯಾಮಾರಿಸಿ, ಐದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ಪೋಷಕರು ಉಡುಪಿ ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದ ತನಿಖೆ ನಡೆಸಲು ಪೊಲೀಸರು ವಿಶೇಷ ತಂಡ ರಚಿಸಿದ್ದರು.
ಯುವಕನ ಮೊಬೈಲ್ ಟವರ್ ಲೊಕೇಶನ್ ಪತ್ತೆ ಹಚ್ಚಿದಾಗ ಗೋವಾದಲ್ಲಿರುವುದು ಗೊತ್ತಾಗಿದೆ. ಗೋವಾಗೆ ತೆರಳಿದ ಪೊಲೀಸರ ತಂಡಕ್ಕೆ ಅಚ್ಚರಿ ಕಾದಿತ್ತು. ಈ ಯುವಕ ಅಲ್ಲಿ ಸ್ನೇಹಿತರೊಂದಿಗೆ ಮೋಜು ಮಸ್ತಿಯಲ್ಲಿ ತೊಡಗಿದ್ದು, ಕ್ಯಾಸಿನೋದಲ್ಲಿ ಆಟವಾಡುತ್ತಿದ್ದ. ಈ ಸಂದರ್ಭದಲ್ಲಿ ಪೊಲೀಸರು ಯುವಕನ ಸೆರೆ ಹಿಡಿದಿದ್ದಾರೆ. ಬಳಿಕ ನಡೆದ ವಿಚಾರಣೆಯಲ್ಲಿ, ಪೋಷಕರಲ್ಲಿ ಹಣ ದೋಚಲು ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಪೋಷಕರ ಹಣ ಎಗರಿಸುವ ಉದ್ದೇಶ ಹಾಗೂ ಪೊಲೀಸರ ಸಮಯ ವ್ಯರ್ಥ ಮಾಡಿದ್ದಕ್ಕೆ ಈತನ ಮೇಲೆ ಕೇಸ್ ದಾಖಲಿಸಲಾಗಿದೆ. ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದನ್ನೂ ಓದಿ:ಅಜ್ಜ-ಅಜ್ಜಿ ಬಳಿಯಿದ್ದ ಇಬ್ಬರು ಮಕ್ಕಳ ಕರೆತಂದು ಕೊಂದ ಅಪ್ಪ: ಆಟೋದಲ್ಲಿ ಶವ ಇರಿಸಿ ಸುತ್ತಾಟ!