ಕರ್ನಾಟಕ

karnataka

ETV Bharat / state

ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿಗೆ ನಟ ರಮೇಶ್ ಅರವಿಂದ್​ ಆಯ್ಕೆ - Shivaram Karanta Award to Ramesh

ಚಿತ್ರರಂಗ ಮತ್ತು ಸಮಾಜಕ್ಕೆ ನಟ ರಮೇಶ್ ಅರವಿಂದ್ ಅವರ ಕೊಡಗೆಯನ್ನು ಪರಿಗಣಿಸಿ ಈ ಬಾರಿಯ 'ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ' ಯನ್ನು ಅವರಿಗೆ ನೀಡಲು ನಿರ್ಧರಿಸಲಾಗಿದೆ.

Actor Ramesh Aravind selected for Kota Shivaram Karanta Huttoor Award
ಕೋಟ ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿಗೆ ನಟ ರಮೇಶ್ ಅರವಿಂದ್​ ಆಯ್ಕೆ

By

Published : Sep 24, 2022, 7:19 PM IST

ಉಡುಪಿ: ಕೋಟ ಗ್ರಾಮ ಪಂಚಾಯತ್, ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟದ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪುರಸ್ಕಾರ ನೀಡುತ್ತಾ ಬಂದಿದೆ. ಚಿತ್ರರಂಗ ಮತ್ತು ಸಮಾಜಕ್ಕೆ ನಟ ರಮೇಶ್ ಅರವಿಂದ್ ಅವರ ಕೊಡಗೆಯನ್ನು ಪರಿಗಣಿಸಿ ಈ ಬಾರಿಯ 'ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ' ನೀಡಲು ನಿರ್ಧರಿಸಲಾಗಿದೆ.

ಕೋಟ ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ 2022ಕ್ಕೆ ಹಲವು ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿ ಕೀರ್ತಿ ಗಳಿಸಿದ ಡಾ. ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಹಿನ್ನೆಲೆ ಈ ಪ್ರಶಸ್ತಿಯನ್ನು ರಮೇಶ್ ಅವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:'ನಯನತಾರಾ - ಬಿಯಾಂಡ್ ದಿ ಫೇರಿಟೇಲ್' ಟೀಸರ್​ ರಿಲೀಸ್

ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ್ ಕಾಯ್ಕಿಣಿ, ಸದಾನಂದ ಸುವರ್ಣ, ಡಾ.ಬಿ.ಎಂ ಹೆಗ್ಡೆ, ಪ್ರಕಾಶ್ ರೈ, ಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ , ಗಿರೀಶ್ ಭಾರದ್ವಾಜ್​ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ABOUT THE AUTHOR

...view details